ಕೂಡ್ಲಿಗಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ,..!!

Listen to this article

ಕೂಡ್ಲಿಗಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ,

ಕೂಡ್ಲಿಗಿ : ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೂಡ್ಲಿಗಿ ಪಟ್ಟಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎ ನ್ ಟಿ ಶ್ರೀನಿವಾಸ್ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್. ಶಾಸಕ ಗವಿಯಪ್ಪ. ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್. ಜಿಎನ್ ಗಣೇಶ್ ಕಂಪ್ಲಿ ಶಾಸಕರು. ಮಾಜಿ ಶಾಸಕರಾದ ಪಿ ಟಿ ಪರಮೇಶ್ವರ್ ನಾಯಕ್. ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷರು ವಿಜಯನಗರ ಜಿಲ್ಲಾಧ್ಯಕ್ಷರಾದ ಶಿರಾಶೇಕ್. ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರವರು ಮಹಾದೇವ ಮೈಲಾರ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆ ಮಹಾತ್ಮ ಗಾಂಧೀಜಿ ಚಿತ್ತಾಬಸ್ಮ ಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಕೆಕೆ ಶಿಳ್ಳು, ಜಯ ಘೋಷಣೆಗಳು ಮುಳುಗಿದವು. ಕೂಡ್ಲಿಗಿ ಕ್ಷೇತ್ರದ ತುಂಬೆಲ್ಲ ಹೆತ್ತ ನೋಡಿದರು ಜನಸಾಗರವೇ ತುಂಬಿ ತುಳುಕುತ್ತಿತ್ತು
ಬಳ್ಳಾರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಈ ತುಕಾರಾಮ್ ಅವರ ಪರ ಚುನಾವಣಾ ಬಹಿರಂಗ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ. ಮೋದಿಯವರು ಹತ್ತತ್ತು ವರ್ಷ ಪ್ರಧಾನಿಯಾಗಿ ಬಡ ಭಾರತೀಯರ, ಮಧ್ಯಮ ವರ್ಗದ ಭಾರತೀಯರ ಪ್ರಗತಿಗಾಗಿ, ಏಳಿಗೆಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿ ಮಾಡಿದ ಉದಾಹರಣೆ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು. ಮೋದಿ ಜನರಿಗೆ ₹15 ಲಕ್ಷ ಕೊಟ್ರಾ? 100 ದಿನಗಳಲ್ಲಿ ವಿದೇಶದಿಂದ ಕಪ್ಪು ಹಣ ತೆಗೆದುಕೊಂಡು ಬಂದು ಎಲ್ಲರ ಖಾತೆಗೂ ಹಾಕುತ್ತೇವೆ ಎಂದು ಹೇಳಿದ್ರಲ್ಲಾ, ಹಾಕಿದರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಿದರಾ? ರೈತರ ಆದಾಯ ದ್ವಿಗುಣ ಮಾಡಿದರಾ? ಅಚ್ಛೇ ದಿನ್ ಬಂದ್ವಾ? ಈ ಕಾರಣದಿಂದಲೇ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ನಾವು ಹೇಳುತ್ತಿರುವುದು ಎಂದು ಸಮರ್ಥಿಸಿಕೊಂಡರು. ಒಂದು ಆಶ್ವಾಸನೆಯನ್ನೂ ಮೋದಿ ಈಡೇರಿಸಿಲ್ಲ. ಎಚ್.ಡಿ. ಕುಮಾರಸ್ವಾಮಿ ಈಗ ಏನಾದರೂ ಹೇಳಿಕೊಳ್ಳಲಿ. ಆದರೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅಭಿವೃದ್ಧಿ ಕೆಲಸಗಳನ್ನೂ ಮುಂದುವರಿಸುತ್ತಿದ್ದೇವೆ ಎಂದು ಹೇಳಿದರು. ತುಕಾರಾಮ್ ಅವರು ತುಂಬಾ ಒಳ್ಳೆಯ ವ್ಯಕ್ತಿ ಅವರು ಶಾಸಕರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ನಮ್ಮ ಕರ್ನಾಟಕದ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತುವುದಕ್ಕೆ ಬಳ್ಳಾರಿ ಲೋಕಸಭಾದಿಂದ ತುಕಾರಾಮ್ ಅವರು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಸೋನಿಯಾ ಗಾಂಧೀಜಿ ಯವರಿಗೆ ರಾಜಕೀಯ ಶಕ್ತಿಯನ್ನು ತುಂಬಿರತಕ್ಕಂತ ಕ್ಷೇತ್ರ. ಸೋನಿಯಾ ಗಾಂಧೀಜಿಯವರು ಕೂಡ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದೆ. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಈ ಬಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸರಳ ಸಜ್ಜನಿಕೆ ವ್ಯಕ್ತಿ. ಇಂಥ ವ್ಯಕ್ತಿ ನಿಮಗೆ ಅಭ್ಯರ್ಥಿಯಾಗಿರುವುದು ನಿಮ್ಮ ಪುಣ್ಯ. ಈ ಬಾರಿ ಒಳ್ಳೆಯದೇ ಲೋಕಸಭಾ ಕ್ಷೇತ್ರದಿಂದ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ಕೊಟ್ಟರು‌.
ಇನ್ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ. ಎ ನ್ ಟಿ ಶ್ರೀನಿವಾಸ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಮ್ಮ ಕ್ಷೇತ್ರಕ್ಕೆ ಆಗಮಿಸಿದ್ದರಿಂದ ದೊಡ್ಡ ಶಕ್ತಿ ಬಂದಂತಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಕೂಡ ಇದೇ ಕ್ರೀಡಾಂಗಣಕ್ಕೆ ಆಗಮಿಸಿ ಪ್ರಚಾರಪಡಿಸಿದ್ದರಿಂದ ಇಂದು ಇದೇ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಂದೆ ನಾನು ಶಾಶಕನಾಗಿ ನಿಂತಿರುವುದು ನನ್ನ ಪುಣ್ಯ ಎಂದರು‌. ಈ ಕ್ಷೇತ್ರದ ಕಾರ್ಯಕರ್ತರು ಕೂಡ ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿ ಕಳಿಸಿದ್ದರಿಂದ ಕ್ಷೇತ್ರದ ಜನರು ಋಣ ನಾನು ಯಾವತ್ತೂ ಮರೆಯುವುದಿಲ್ಲ. ನಮ್ಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ತುಕಾರಾಮ್ ಅವರನ್ನು ನಾವೆಲ್ಲರೂ ಸೇರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್ ವೈ ಗೋಪಾಲ್ ಕೃಷ್ಣ ಮಾತನಾಡಿ ಕೂಡ್ಲಿಗಿ ಕ್ಷೇತ್ರದ ಜನರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಒಳ್ಳೆಯ ವ್ಯಕ್ತಿಗೆ ಯಾವಾಗಲೂ ಕೂಡ್ಲಿಗಿ ಕ್ಷೇತ್ರದ ಜನರು ಕೈಹಿಡಿಯುತ್ತಾರೆ. ಕೂಡ್ಲಿಗಿ ಕ್ಷೇತ್ರದಲ್ಲಿ ಮುಖ್ಯವಾದ ಕೆಲಸ ಅಂದರೆ 74 ಕೆರೆಗಳಿಗೆ ತುಂಬಿಸುವ ಯೋಜನೆ ಈಗಾಗಲೇ ಕಾಮಗಾರಿ ಪೂರ್ಣಗೊಂಡರೆ ಕೂಡ್ಲಿಗಿ ಕ್ಷೇತ್ರದ ಜನರು ನೆಮ್ಮದಿಯಿಂದ ಜೀವನ ಮಾಡುತ್ತಾರೆ. ತಾವುಗಳು ಮುಖ್ಯಮಂತ್ರಿಯವರು ಕೂಡ್ಲಿಗಿ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನವನ್ನು ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಗೋಪಾಲ್ ಕೃಷ್ಣ ರವರು ಮನವಿ ಮಾಡಿದರು.

ಈ ವೇಳೆ ಅಖಂಡ ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಈ ತುಕಾರಾಮ್ ಅವರು ಮಾತನಾಡಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತು ಇನ್ನು ಅನೇಕ ಸಚಿವರು ಶಾಸಕರು. ಈ ಕ್ಷೇತ್ರದಲ್ಲಿ ನೀನೆ ಸೂಕ್ತವಾದ ವ್ಯಕ್ತಿ ಅಂತ ಲೋಕಸಭೆಗೆ ನನ್ನ ಹೆಸರನ್ನು ಘೋಷಣೆ ಮಾಡಿದ್ದಾರೆ. ನಾನು ಈ ಕ್ಷೇತ್ರದ ಜನರಿಗೆ ಪ್ರಾಮಾಣಿಕ ನಿಷ್ಠೆಯಿಂದ ಸೇವೆ ಮಾಡುತ್ತೇನೆ ಈ ಬಾರಿ ನನಗೆ ಅವಕಾಶ ಮಾಡಿಕೊಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಸಚಿವ ಜಮೀರ್ ಅಹಮದ್ ಖಾನ್. ಸಚಿವ ರಾಮಲಿಂಗ ರೆಡ್ಡಿ. ಶಾಸಕ ಡಾ ಎನ್‌ಟಿ ಶ್ರೀನಿವಾಸ್. ಶಾಸಕ ಗವಿಯಪ್ಪ. ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್. ಕಂಪ್ಲಿ ಶಾಸಕ ಜಿ ಎಂ ಗಣೇಶ್. ಮಾಜಿ ಶಾಸಕರಾದ ಪಿ ಟಿ ಪರಮೇಶ್ವರ್ ನಾಯಕ್. ಮಾಜಿ ಶಾಸಕರಾದ ಭೀಮ ನಾಯಕ್. ಕೆಎಂಎಫ್ ಅಧ್ಯಕ್ಷರು. ಶಿರಾಶೇಕ್ ಮಾಜಿ ಶಾಸಕರು ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು. ಅಲ್ಲಂ ವೀರಭದ್ರಪ್ಪ. ಮಾಜಿ ಸಚಿವರು ನಬಿ ಸಾಬ್. ತಿಪ್ಪೇಸ್ವಾಮಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಶಶಿಸ್ವಾಮಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು. ಎಸ್ ವೆಂಕಟೇಶ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು. ನಾಗಮಣಿ ಜಿಂಕಲ್ ರಾಜ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷ. ಎನ್ ಟಿ ತಮ್ಮಣ್ಣ ಕಾಂಗ್ರೆಸ್ ಮುಖಂಡರು.ಹೊಸಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ ಗೌಡ. ಹಾಗೂ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 

ವರದಿ. ಬಸವರಾಜ್, ಎಂ, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend