ಕೂಡ್ಲಿಗಿ ಕ್ಷೇತ್ರದ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ನೌಕರರ ಸಂಘ ಹಾಗೂ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡ ಶಾಸಕ,ಡಾ “ಎನ್, ಟಿ, ಶ್ರೀನಿವಾಸ್…!!!

Listen to this article

ಕೂಡ್ಲಿಗಿ ಕ್ಷೇತ್ರದ ಪ್ರವಾಸಿ ಮಂದಿರದಲ್ಲಿ ದಿನಾಂಕ 20/07/2024 ರಂದು ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಸಂಘ ಹಾಗೂ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದೆ.

ನಾವೆಲ್ಲಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾಂಗ ಅದರ ಆಧಾರ ಸ್ತಂಭಗಳು. ಅದರಂತೆ ಸರ್ಕಾರಿ ನೌಕರರು ಆಡಳಿತ ವ್ಯವಸ್ಥೆಯ ಶಕ್ತಿ. ಅವರ ಬೇಡಿಕೆಯಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದ್ದೇವೆ. ಇದರಿಂದ ರಾಜ್ಯದ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಅನುಕೂಲವಾಗಲಿದ್ದು,
ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ದೇವರು ವರನೂ ಕೊಡೋದಿಲ್ಲ, ಶಾಪನೂ ಕೊಡೋದಿಲ್ಲ ಅವಕಾಶ ಮಾತ್ರ ಕೊಡ್ತಾನೆ. ಅದನ್ನು ನಾವು ಯಾವ ರೀತಿ ಉಳಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯವಾಗಿದೆ. ನಮ್ಮ ಸರ್ಕಾರ ಎಲ್ಲರ ಏಳಿಗೆಗೆ ಶ್ರಮಿಸಲಿದ್ದು, ಅಭಿವೃದ್ಧಿಯೇ ನಮ್ಮ ಮೂಲಮಂತ್ರವಾಗಿದೆ ಎಂದು ಡಾ. ಶ್ರೀನಿವಾಸ್ ಎನ್ ಟಿ ರವರು ತಿಳಿಸಿದರು
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸರ್ಕಾರಿ ನೌಕರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend