ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಒತ್ತು ಕೊಡುವುದೇ – ನನ್ನ ಮೊದಲ ಧ್ಯೇಯ ಶಾಸಕ ಡಾ”, ಎನ್, ಟಿ, ಶ್ರೀನಿವಾಸ್…!!!

Listen to this article

ಆರೋಗ್ಯ ಕ್ಷೇತ್ರದ ಕ್ರಾಂತಿಗೆ ನಾಂದಿ ; ಪ್ರಾಥಮಿಕ, ಸಮುದಾಯ ಮತ್ತು ಉಪ ಆರೋಗ್ಯ ಕೇಂದ್ರಗಳನ್ನು ನವೀಕರಣಗೊಳಿಸುವೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ.

“ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಒತ್ತು ಕೊಡುವುದೇ – ನನ್ನ ಮೊದಲ ಧ್ಯೇಯ”

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ನವೀಕರಣಗೊಳಿಸಲು ಭೂಮಿಪೂಜೆಯನ್ನು ದಿ. 29-07-24 ರಂದು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ನೆರವೇರಿಸಿ ಮಾತನಾಡಿದರು. ನಮ್ಮ ಕೂಡ್ಲಿಗಿ ಕ್ಷೇತ್ರದ ಉದ್ದಕ್ಕೂ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡುವ, ಸಾಮಾಜಿಕ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳನ್ನು ನವೀಕರಣ ಮಾಡಲಾಗುತ್ತದೆ ಎಂದೂ ಹೇಳಿದರು. ಈ ಸಂದರ್ಭದಲ್ಲಿ ಹೂಡೇಂ, ತೂಲಹಳ್ಳಿ, ಆಲೂರು, ಬೆಳ್ಳಿಘಟ್ಟ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊಸ ಅಂಬ್ಯುಲೆನ್ಸ್ ಗಳನ್ನು ಉದ್ಘಾಟಿಸಿದರು. ನಮ್ಮಲ್ಲಿ ಪ್ರತಿಯೊಂದು ಕುಗ್ರಾಮಗಳಲ್ಲಿ ತಡರಾತ್ರಿವರೆಗೂ ಆರೋಗ್ಯದ ಸಮಸ್ಯೆಗಳು ಕಂಡುಬಂದಾಗ ಅಂಬ್ಯುಲೆನ್ಸ್ ವ್ಯವಸ್ಥೆಯ ಸಮಸ್ಯೆ ಎದುರಾಗುತಿತ್ತು. ಅಂತಹ ತೊಂದರೆಗಳನ್ನು ನೀಗಿಸಲು ಇವುಗಳು ಸಹಕಾರಿಯಾಗಬಲ್ಲವು ಎಂದೂ ಹೇಳಿದರು. ‌ಹಾಗೆಯೇ, ಸರ್ಕಾರಿ ಸಂಯುಕ್ತ ಪದವಿ ಪೂರ್ವಕಾಲೇಜು ಆವರಣದಲ್ಲಿ ಹೊಸದಾಗಿ ಬಂದಿರುವ ಪ್ರೌಢ ಶಾಲೆಯ ಕಟ್ಟಡಗಳ ಭೂಮಿ ಪೂಜೆ ನೆರವೇರಿಸಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಡಲು ಗುತ್ತಿಗೆದಾರರು ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಬೇಕು ಎಂದರು. ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಜ್ಞಾನ ವಿಭಾಗದ ಪ್ರಯೋಗಾಲಯವನ್ನು ಪರಿಶೀಲಿಸಿದರು. ಈ ವೇಳೆ ಗಣ್ಯರು, ವೈದ್ಯಾಧಿಕಾರಿಗಳು, ಉಪನ್ಯಾಸಕರು, ಶಿಕ್ಷಕರು, ಸಾರ್ವಜನಿಕರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು…

ವರದಿ. ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend