ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ.
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ದಿ. 06-08-24 ರಂದು ಹೂಡೇಂ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್ .ಎನ್.ಟಿ. ಅವರು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ ತರಲು ಗ್ರಾಮೀಣ ಭಾಗದಲ್ಲಿ ಬಾಲ್ಯವಿವಾಹ ತಡೆಗಟ್ಟಿ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಾತ್ರಿಕೆಹಟ್ಟಿ, ಜುಮ್ಮೋಬನಹಳ್ಳಿ- ಮ್ಯಾಸರಹಟ್ಟಿ, ಜರ್ಮಲಿ, ಅರ್ಜುನ ಚಿನ್ನೇನಹಳ್ಳಿ, ಇನ್ನೂ ಅವಶ್ಯ ಇರುವ ಕಡೆ ಮುಂದಿನ ದಿನಗಳಲ್ಲಿ ಸರ್ಕಾರಿ ಪ್ರೌಢ ಶಾಲೆಗಳನ್ನು ನಿರ್ಮಿಸಲಾಗುವುದು ಎಂದೂ ಹೇಳಿದರು.
ಶಾಲೆಯ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ನಮ್ಮ ತಾಲೂಕಿನಿಂದ ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು ಎಂದೂ ಕಿವಿಮಾತು ಹೇಳಿದರು. ಇನ್ನೂ ಶಿಕ್ಷಣ ಮತ್ತು ಆರೋಗ್ಯದ ಜೊತೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರದಿಂದ ಸಹಕಾರ ಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಿಕ್ಷಣ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಮುಖಂಡರು , ಗ್ರಾ. ಪಂ . ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030