ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ: 33 ಪ್ರಕರಣ ದಾಖಲು, ರೂ.3300 ದಂಡ ವಸೂಲಿ…!!!

Listen to this article

ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ
ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ: 33 ಪ್ರಕರಣ ದಾಖಲು, ರೂ.3300 ದಂಡ ವಸೂಲಿ…
ಚಿತ್ರದುರ್ಗ:ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಸೋಮವಾರ ಚಿತ್ರದುರ್ಗ ನಗರದ ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣ ಪ್ರದೇಶಗಳಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ದಾಳಿ ನಡೆಸಿ, ದಂಡ ವಿಧಿಸಿದೆ.
ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 29 ಕೇಸುಗಳನ್ನು ದಾಖಲಿಸಿ ರೂ. 2900/- ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 04 ಕೇಸುಗಳನ್ನು ದಾಖಲಿಸಿ ರೂ. 400/- ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ತನಿಖಾ ತಂಡದ ಅಧಿಕಾರಿಗಳಾದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಪೊಲೀಸ್ ಇಲಾಖೆಯ ಬಿ.ಜಯಪ್ರಕಾಶ್, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು…

ವರದಿ. ಸುರೇಶ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend