ಸಫಾಯಿ ಕರ್ಮಚಾರಿಗಳ ಕುಂದು-ಕೊರತೆಗಳಿದ್ದಲ್ಲಿ ಸಕಾಲದಲ್ಲಿ ಪರಿಹರಿಸಿ: ಕಂದಕೂರು ರಾಮುಡು…!!!

Listen to this article

ಸಫಾಯಿ ಕರ್ಮಚಾರಿಗಳ ಕುಂದು-ಕೊರತೆಗಳಿದ್ದಲ್ಲಿ ಸಕಾಲದಲ್ಲಿ ಪರಿಹರಿಸಿ: ಕಂದಕೂರು ರಾಮುಡು

ಬಳ್ಳಾರಿ:ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡುವಲ್ಲಿ ಕಾರ್ಯನಿರ್ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯದ ಕಾಳಜಿಯೊಂದಿಗೆ ನಿಗಧಿತ ಸಮಯದಲ್ಲಿ ವೇತನ ಪಾವತಿ ಸೇರಿದಂತೆ ಯಾವುದೇ ಕುಂದುಕೊರತೆಗಳು ಉಂಟಾಗದoತೆ ಕ್ರಮವಹಿಸಬೇಕು ಎಂದು ಸಫಾಯಿ ಕರ್ಮಚಾರಿ ವಿಭಾಗದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾದ ಕಂದಕೂರು ರಾಮುಡು ಹೇಳಿದರು.
ಸೋಮವಾರದಂದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಂದು ಇಲಾಖೆಯ ಕಚೇರಿಗಳಲ್ಲಿ ಸ್ವಚ್ಛವಾಗಿಡಲು ಹಾಗೂ ಮೂಲ ಸೌಕರ್ಯಗಳ ಕಾಳಜಿಯನ್ನು ತೆಗೆದುಕೊಳ್ಳಲು ಸಫಾಯಿ ಕರ್ಮಚಾರಿಗಳ ಕರ್ತವ್ಯ ಬಹಳಷ್ಟು ಪ್ರಾಮುಖ್ಯತೆ ಹೊಂದಿದೆ. ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಾರ್ಡ್ಗಳು, ಹೆರಿಗೆ ಕೊಠಡಿ, ರೋಗಿಗಳಿಗೆ ಬ್ಯಾಂಡೇಜ್ ಹಾಕುವುದು ಸೇರಿದಂತೆ ಪ್ರಮುಖ ಸ್ವಚ್ಛತಾ ಕೆಲಸಗಳನ್ನು ನಿರ್ವಹಿಸುತ್ತಿದ್ದು, ಅವರ ವೇತನ ಇತರೆ ಭತ್ಯೆಗಳು ಸಕಾಲದಲ್ಲಿ ಒದಗಿಸುವಿಕೆ ಮತ್ತು ಸಕಾಲದಲ್ಲಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಜಿಲ್ಲೆಯ 5 ತಾಲ್ಲೂಕಗಳಲ್ಲಿ ಒಟ್ಟು 272 ಡಿ-ಗ್ರೂಪ್ ಪರಿಚಾರಕ ಹುದ್ದೆಗಳು ಮಂಜೂರಿದ್ದು, ಅದರಲ್ಲಿ 120 ಜನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಹೊರಗುತ್ತಿಗೆ ಆಧಾರದ ಮೇಲೆ ನಾನ್ ಕ್ಲಿನಿಕಲ್ ಅಡಿ 35 ಜನ ಕಾರ್ಯನಿರ್ವಹಿಸುತ್ತಿದ್ದು, ಖಾಯಂ ನೌಕರರಿಗೆ ಕೆಸಿಎಸ್‌ಆರ್ ನಿಯಮಾವಳಿ ಅಡಿ ವೇತನ ಸಹಿತ ಅಗತ್ಯ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ನಾನ್ ಕ್ಲಿನಿಕಲ್ ಸೇವೆಗಳಡಿ ಸಿಬ್ಬಂದಿಯವರ ವೇತನವನ್ನು ಸಂಬoಧಿಸಿದವರಿಗೆ ಏಜೆನ್ಸಿ ಮೂಲಕ ಪಾವತಿಸುವ ಜೊತೆಗೆ ಪಿಎಫ್, ಇಎಸ್‌ಐ ಒಳಗೊಂಡoತೆ ಕಟಾವುಗಳನ್ನು ಕೈಗೊಳ್ಳಲಾಗುತ್ತಿದೆ. ಇಲಾಖೆಯಡಿ ನೀಡುವ ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಾದ ಶಿವಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕಛೇರಿ ಅಧೀಕ್ಷಕ ಬಸವರಾಜ, ಪ್ರಥಮ ದರ್ಜೆ ಸಹಾಯಕ ಸೈಯದ್ ಶಾಕೀರ್ ಹುಸೇನ್ ಸೇರಿದಂತೆ ಇತರರು ಹಾಜರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend