ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ದಾಖಲೆಗಳಿಲ್ಲದೇ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಶಪಡಿಸಿಕೊಂಡರು.
ಬೆಳಗಾವಿ : ಕಾರಿನಲ್ಲಿ ದಾಖಲೆಗಳಿಲ್ಲದೇ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಕಾರು ತಡೆದು ವಿಚಾರಣೆ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ರಾಮದುರ್ಗ ತಾಲೂಕು ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿ ಕಾರು ನಿಲ್ಲಿಸಿ ಪೊಲೀಸರು ತಪಾಸಣೆ ಮಾಡಿ ಮಾಡಿದಾಗ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಪತ್ತೆಯಾಗಿದೆ.
ಪೊಲೀಸರು ಚಿಕ್ಕೋಡಿ ತಾಲೂಕಿನ ಬೋರಗಾಂವನ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠಲ್ ಢವಳೇಶ್ವರ ತನ್ನ ಕಾರಿನಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ…
ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030