ಚುನಾವಣಾ ವೀಕ್ಷಕರಿಂದ ಮತಗಟ್ಟೆ ಪರಿಶೀಲನೆ…!!!

Listen to this article

ಚುನಾವಣಾ ವೀಕ್ಷಕರಿಂದ ಮತಗಟ್ಟೆ ಪರಿಶೀಲನೆ

ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ: ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ 9 ಮತಗಟ್ಟೆಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೀಕ್ಷಕರು ಇಂದು ಮಂಡ್ಯ ತಾಲ್ಲೂಕು ಪಂಚಾಯತ್ ಹಾಗೂ ತಾಲ್ಲೂಕು ಕಚೇರಿಯಲ್ಲಿ ತೆರೆಯಲಾಗುವ ಮತಗಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಇದಕ್ಕೂ ಮುನ್ನ ಚುನಾವಣೆಯ ಸಹಾಯಕ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಂದ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಪರಿಶೀಲನೆಯ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಮಂಡ್ಯ ತಹಶೀಲ್ದಾರ್ ಶಿವಕುಮಾರ ಬಿರಾದಾರ್ ಉಪಸ್ಥಿತರಿದ್ದರು…

ವರದಿ, ಸುರೇಶ್, ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend