ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮ ಪಂಚಾಯ್ತಿಯಲ್ಲಿ ಬುಧವಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2024 -25ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆಯನ್ನು ನಡೆಸಲಾಯಿತು. ತಾಲೂಕು ಸಾಮಾಜಿಕ ಪರಿಶೋಧನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಕೆ.ಸಿ ಉಷಾದೇವಿ ಮಾತನಾಡಿ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಇನ್ನು ಹಲವು ಇಲಾಖೆಗಳಲ್ಲಿ ರೈತರಿಗೆ ಉದ್ಯೋಗ ಖಾತರಿ ಯೋಜನೆಯಡಿ ಅನೇಕ ಯೋಜನೆಗಳು ಇವೆ ಈ ಯೋಜನೆಗಳನ್ನು ರೈತರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಾಘವೇಂದ್ರ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸವಿತಾ, ಉಪಾಧ್ಯಕ್ಷರಾದ, ರಾಜಪ್ಪ, ಕಾರ್ಯದರ್ಶಿ ಶೇಖರಪ್ಪ, ವೆಂಕಟೇಶ್, ಅಜಯ್, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಹಾಗೂ ಎಲ್ಲ ಸದಸ್ಯರು ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು…
ವರದಿ. ಸುರೇಶ್, ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030