ಸಿದ್ದಾಪುರ.ಸಾಹಿ.ಪ್ರಾ ಶಾಲೆಯಲ್ಲಿ ಪರಿಸರ ಸಂರಕ್ಷಣ ಕಾರ್ಯಕ್ರಮ…!!!

Listen to this article

ಸಿದ್ದಾಪುರ.ಸಾಹಿ.ಪ್ರಾ ಶಾಲೆಯಲ್ಲಿ ಪರಿಸರ ಸಂರಕ್ಷಣ ಕಾರ್ಯಕ್ರಮ

ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ ವೃದ್ಧಿ – ಶಿಕ್ಷಕ ಮಂಜುನಾಥ್
ಕಾನ ಹೊಸಹಳ್ಳಿ :-ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಮರ ಗಿಡಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಟ್ಟರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆಯೆಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ್ ತಿಳಿಸಿದರು. ಗುಂಡು ಮುಣು ಗು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿದ್ದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಪರಿಸರ ಸಂರಕ್ಷಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ನಾವು ವಾಸ ಮಾಡುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮ್ಮಪರಿಸರ ಇದು ಮಾನವನ ಸಾಮಾಜಿಕ, ಮಾನಸಿಕ ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಹಾಗೂಹೊ ಣೆಯಾಗಿದೆ. ಆದ್ದರಿಂದ ಸಸಿ ಳನ್ನು ನೆ ಟ್ಟು ಗಿಡ ಮರಗಳನ್ನು ಬೆಳೆಸಿ ಒಳ್ಳೆಯ ವಾತಾವರಣವನ್ನು ನಿರ್ಮಿಸೋಣ ಉತ್ತಮ ಆರೋಗ್ಯವಂತರಾಗಿ ಬಾಳೋಣ ಎಂದು ಈ ಕಾರ್ಯಕ್ರಮ ಕುರಿತು ಮಾತನಾಡಿದರು.
ಈ ಕಾರ್ಯಕ್ರಮ ಕುರಿತು ಧರ್ಮಸ್ಥಳ ಸಂಘದ ತಾಲೂಕು ಕೃಷಿ ಮೇಲ್ವಿಚಾರಕ ಮಹಾಲಿಂಗಯ್ಯ ಮಾತನಾಡಿ ಹಾಗೂ ಶಾ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಮಮತಾ. ಗ್ರಾಪಂ ಸದಸ್ಯರಾದ ಗಂಗಮ್ಮ. ಮುಖ್ಯ ಶಿಕ್ಷಕ ಬಸವರಾಜ್. ಚಿಕ್ಕಜೋಗಿಹಳ್ಳಿ ವಲಯದ ಮೇಲ್ವಿಚಾರಕಿ ರೇಣುಕ. ಶಾಲೆಯ ಸಹ ಶಿಕ್ಷಕರುಗಳಾದ ಲಕ್ಷ್ಮಿ ದೇವಿ, ಶೃತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸ್ಥಳೀಯ ಪ್ರತಿನಿಧಿಗಳು ಶಾಲಾ ಮಕ್ಕಳು ಇತರರು ಇದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend