ಆಡಳಿತಕ್ಕೆ ಚುರುಕು ಮುಟ್ಟಿಸಿ ಸರ್ಕಾರವನ್ನು ಪ್ರತಿ ಮನೆಬಾಗಿಲಿಗೆ ಕೊಂಡೊಯ್ಯಲಾಗುತ್ತದೆ. ಶಾಸಕ – ಡಾ.‌ಶ್ರೀನಿವಾಸ್.‌ ಎನ್. ಟಿ‌‌….!!!

Listen to this article

ಆಡಳಿತಕ್ಕೆ ಚುರುಕು ಮುಟ್ಟಿಸಿ ಸರ್ಕಾರವನ್ನು ಪ್ರತಿ ಮನೆಬಾಗಿಲಿಗೆ ಕೊಂಡೊಯ್ಯಲಾಗುತ್ತದೆ. ಶಾಸಕ – ಡಾ.‌ಶ್ರೀನಿವಾಸ್.‌ ಎನ್. ಟಿ‌‌.

ವಿಜಯನಗರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದ ವಿವಿಧ ಅಧಿಕಾರಿಗಳೊಂದಿಗೆ ಕೂಡ್ಲಿಗಿ ತಾಲೂಕಿನ ಜನತಾ ದರ್ಶನ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರ ಅಧ್ಯಕ್ಷತೆ ಹಾಗೂ ಮಾನ್ಯ ಜಿಲ್ಲಾ ಅಧಿಕಾರಿಗಳಾದ ಎಂ.ಎಸ್. ದಿವಾಕರ ನೇತೃತ್ವದ ಪ್ರವಾಸಿ ಮಂದಿರ ಆವರಣದಲ್ಲಿ ದಿ. 26-06-24 ರಂದು ಯಶಸ್ವಿಯಾಗಿ ನಡೆಸಿಕೊಟ್ಟರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ , ಸನ್ಮಾನ್ಯರು ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ.‌ಶಿವಕುಮಾರ್ ಅವರ ಆದೇಶದಂತೆ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಲು ತಾಲೂಕು ದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ನಿರ್ಲಕ್ಷ್ಯಕ್ಕೆ ಒಳಪಟ್ಟ ಸಮಸ್ಯೆಗಳು, ಸವಾಲುಗಳನ್ನು ಸ್ಥಳದಲ್ಲೇ ಬಗೆಹರಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದೂ ಶಾಸಕರು ತಿಳಿಸಿದರು . ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಚಿಕ್ಕಮಕ್ಕಳಿಗೆ ವಿಟಮಿನ್ ಎ ಔಷಧಿಯನ್ನು ಬಾಯಿಗೆ ಬಿಡುವ ಮೂಲಕ ಚಾಲನೆ ನೀಡಿದರು. ಅಂಗವಿಕಲರಿಗೆ ಹದಿನೈದಕ್ಕಿಂತ ಹೆಚ್ಚು ತ್ರೀ ಚಕ್ರವಾಹನಗಳನ್ನು ವಿತರಿಸಿ ಮಾನವೀಯತೆ ಮೆರೆದರು. ಕೃಷಿ ಇಲಾಖೆಯ ವಾಹನಕ್ಕೆ ಚಾಲನೆ ನೀಡಿದರು.

ಗೋವಿಂದಗಿರಿ ತಾಂಡಕ್ಕೆ ಕಂದಾಯ ಗ್ರಾಮವನ್ನಾಗಿ ಮಾಡಲು ಕೊಟ್ಟ ಮನವಿಗೆ ಜಿಲ್ಲಾ ಅಧಿಕಾರಿಗಳು ಮತ್ತು ಶಾಸಕರು ಸ್ಪಂದಿಸಿದರು. ವಿಧವಾ ವೇತನ, ವೃದ್ಧಾಪ್ಯ ವೇತನ, ರೇಷನ್ ಕಾಡ್೯ ಸಮಸ್ಯೆ, ವಸತಿ ವ್ಯವಸ್ಥೆ ಬೇಡಿಕೆ, ಆಯಾ ಗ್ರಾಮ ಪಂಚಾಯತಿ ಮತ್ತು ತಾಲೂಕು ಮಟ್ಟದಲ್ಲಿ ಭೂಮಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಜಿಲ್ಲಾ ಅಧಿಕಾರಿಗಳು ಸೂಚಿಸಿದರು. ಹಾಗೆಯೇ ಶಾಸಕರು ಮತ್ತು ಜಿಲ್ಲಾ ಅಧಿಕಾರಿಗಳು ತಾಲೂಕು ಕಛೇರಿ, ತಾಲೂಕು ಸರ್ಕಾರಿ ಆಸ್ಪತ್ರೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend