ಜನಸ್ಪರ್ಶಿ ಆಡಳಿತಕ್ಕೆ ಶಾಸಕರ ಕಟ್ಟಪ್ಪಣೆ…!!!

Listen to this article

ಜನಸ್ಪರ್ಶಿ ಆಡಳಿತಕ್ಕೆ ಶಾಸಕರ ಕಟ್ಟಪ್ಪಣೆ
ದಿನಾಂಕ 11.07.2024 ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ತಾಲೂಕು ಪ್ರಗತಿ ಪರಿಶೀಲನ ಸಭೆ ಜರುಗಿಸಿ, ಮಾತನಾಡಿದರು. ಆಡಳಿತ ಜನಸ್ಪರ್ಶಯಾಗಿರಬೇಕು, ಸ್ಪಂದನೆ ತಲಸ್ಪರ್ಶಿಯಾಗಿರಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವೆಂದು ತಾಲೂಕು ಕೆಡಿಪಿ ಸುದೀರ್ಘ ಸಭೆಯಲ್ಲಿ ಇದೇ ಅಂಶವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಸುಗಮ ಪರಿಣಾಮಕಾರಿ ಆಡಳಿತ, ಸರ್ಕಾರದ ಕಾರ್ಯಕ್ರಮಗಳು ಸಕಾಲಕ್ಕೆ ಫಲಾನುಭವಗಳಿಗೆ ತಲುಪಬೇಕು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ತಾಲೂಕಿನ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಪರಂಪರೆಯನ್ನು ಅರಿತರೆ ಜನ ಪರವಾಗಿ ಕೆಲಸ ಮಾಡುವುದು ಸುಲಭವಾಗುತ್ತದೆ ಎಂದರು.
” ಅಧಿಕಾರಿಗಳಿಗೆ ಕಟ್ಟಪ್ಪಣೆ”
* ಕಳಪೆ ಬೀಜ ಮತ್ತು ಗೊಬ್ಬರ ತಡೆಗಟ್ಟಲು ಕೃಷಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
* ಕೃಷಿ ಭಾಗ್ಯ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು
* ರೈತರಿಗೆ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು
* ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು
* ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣ ನಿಯಂತ್ರಿಸಬೇಕು
* ರಸ್ತೆ ಅಪಘಾತ ತಡೆಯುವ ಯೋಜನೆಗಳನ್ನು ರೂಪಿಸಬೇಕು.
* ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ಮೇಲ್ದರ್ಜೆಗೆ ಗುರಿಯನ್ನು ನಿಗದಿಗೊಳಿಸಬೇಕು
*ಕೆರೆ ನೀರು ತುಂಬಿಸುವ ಯೋಜನೆ ಕಾಮಗಾರಿ ಜರೂರಾಗಿ ಮುಗಿಸಬೇಕು
*ಡೆಂಗು ಜ್ವರ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು
*ಶೈಕ್ಷಣಿಕ ಚಟುವಟಿಕೆ ಬಗ್ಗೆ ಹೆಚ್ಚು ಗಮನ ಹರಿಸಬೇಕು
*ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ವಿವಿಧ ಇಲಾಖೆ ಅಭಿವೃದ್ಧಿ ಅನುಷ್ಠಾನದಲ್ಲಿ ನಿಧಾನ ಗತಿ, ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಗತಿ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ತಾ. ಪಂ. ಆಡಳಿತ ಅಧಿಕಾರಿಗಳು & ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಗಳು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend