ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರಕ್ಕೆ ಸೀಮಿತವಾಗಿರದೆ ವ್ಯಕ್ತಿ ವಿಕಾಸನ, ಸಂವಹನ ಕೌಶಲ್ಯ ಬೆಳೆಸಿಕೊಳ್ಳಿ : ಡಾ. ಶ್ರೀನಿವಾಸ್ ಎನ್‌ ಟಿ…!!!

Listen to this article

ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರಕ್ಕೆ ಸೀಮಿತವಾಗಿರದೆ ವ್ಯಕ್ತಿ ವಿಕಾಸನ, ಸಂವಹನ ಕೌಶಲ್ಯ ಬೆಳೆಸಿಕೊಳ್ಳಿ : ಡಾ. ಶ್ರೀನಿವಾಸ್ ಎನ್‌ ಟಿ ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ. 29-07-24 ರಂದು ಉದ್ಘಾಟನೆ ಮಾಡಿ ಮಾತನಾಡಿ,ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದೊಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ನಾವುಗಳು ಮಾಡಬೇಕು. ವಿದ್ಯಾರ್ಥಿಗಳು ಪ್ರತಿಯೊಂದು ರಂಗದಲ್ಲೂ ಹೆಜ್ಜೆ ಹಾಕಲು ಸಿದ್ಧವಾಗಬೇಕು ಎಂದೂ ಕಿವಿ ಮಾತು ಹೇಳಿದರು. ಪ್ರತಿಯೊಬ್ಬರೂ ತಂದೆ- ತಾಯಿಗಳಿಗೆ ಗುರಿ ಹಿರಿಯರಿಗೆ ವಿನಯರಾಗಿ ಒಳ್ಳೆಯ ಮಕ್ಕಳಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಸೃಜನಶೀಲತೆ ಪ್ರತಿಧ್ವನಿಸುವಂತಾಗಲಿ, ಈ ಚಟುವಟಿಕೆಗಳಿಂದ ವ್ಯಕ್ತಿ ವಿಕಾಸನ, ಆತ್ಮವಿಶ್ವಾಸ ವೃದ್ಧಿ, ಸಂವಹನ ಕೌಶಲ್ಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿ ಸಮಾಜದಲ್ಲಿ ಉತ್ತಮ ಜೀವನ ರೂಪಿಸಲು ಸಹಕಾರಿಯಾಗುತ್ತದೆ .ಆಗಸ್ಟ್ ತಿಂಗಳಲ್ಲಿ ಪ್ರತಿಭಾವಂತ ಸೃಜನಶೀಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಬಹುಮಾನ ವಿತರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ
ಗ್ರಾಮೀಣ ನೃತ್ಯಕ್ಕೆ ವಿದ್ಯಾರ್ಥಿಗಳ ಜೊತೆ ಶಾಸಕರು ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಉಪ ನಿರ್ದೇಶಕರು ಕಾಲೇಜ್ ಶಿಕ್ಷಣ ಇಲಾಖೆ, ಸ.ಸಂ. ಪ.ಪೂರ್ವ ಕಾಲೇಜ್ ಪ್ರಾಚಾರ್ಯರಾದ ಶ್ರೀಮತಿ ಕೊತ್ಲಮ್ಮ ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರು & ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend