ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ…!!!

Listen to this article

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಅಂತಿಮ ವರ್ಷದ ʼಇ-ಕಾಮರ್ಸ್‌ʼ ವಿಷಯಕ್ಕೆ ನಡೆದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಜೊತೆಗೆ ಉತ್ತರದ ಪ್ರತಿಯನ್ನು ಪರೀಕ್ಷಾರ್ಥಿಗಳಿಗೆ ವಿತರಿಸಿರುವ ಘಟನೆ ನಡೆದಿತ್ತು. ಈ ಸಂಬಂಧ ಮಾಧ್ಯಮ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವರು ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜುಲೈ 6ರಂದು ನಡೆದ ʼಇ-ಕಾಮರ್ಸ್‌ʼ ವಿಷಯಕ್ಕೆ ಸಂಬಂಧಿಸಿದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಲೋಪದೋಷ ಕಂಡು ಬಂದಿದ್ದನ್ನು ಗಮನಿಸಿ ತಕ್ಷಣವೇ 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಯಿತು. ಈ ಬಗ್ಗೆ ಪರಿಶೀಲಿಸಿದಾಗ ಸ್ನಾತಕ ವಾಣಿಜ್ಯಶಾಸ್ತ್ರ ವಿಭಾಗದ ಪರೀಕ್ಷಾ ಮಂಡಳಿಯ ಲೋಪ ಕಂಡು ಬಂದಿದ್ದು, ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು.

ಅದಕ್ಕನುಗುಣವಾಗಿ ಸ್ನಾತಕ ವಾಣಿಜ್ಯಶಾಸ್ತ್ರ ವಿಭಾಗದ ಪರೀಕ್ಷಾ ಮಂಡಳಿ ಅಧ್ಯಕ್ಷರು ಲಿಖಿತ ಉತ್ತರ ನೀಡಿ ತಮ್ಮಿಂದಾಗಿರುವ ತಪ್ಪನ್ನು ಒಪ್ಪಿಕೊಂಡಿದ್ದರು. ಈ ಆಧಾರದ ಮೇಲೆ ಅಧ್ಯಕ್ಷರಿಗೆ ಮತ್ತು ಸದಸ್ಯರುಗಳಿಗೆ ತಲಾ 5 ಸಾವಿರ ರೂ. ದಂಡ ವಿಧಿಸಲು ನಿರ್ಣಯಿಸಲಾಗಿದೆ. ಜುಲೈ 6 ರಂದು ರದ್ದುಗೊಂಡಿದ್ದ ಪರೀಕ್ಷೆಯನ್ನು ಆಗಸ್ಟ್‌ 24ರಂದು ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆಯು ಕೊನೆಗೊಂಡಿರುತ್ತದೆ ಎಂದು ಕುಲಸಚಿವರು ತಿಳಿಸಿದ್ದಾರೆ…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend