ಮಾಜಿ ರಾಜ್ಯಪಾಲರಾದ ಬಿ. ರಾಚಯ್ಯರವರ ಸ್ಮಾರಕ ಉದ್ಘಾಟನಾ ಸಮಾರಂಭ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ…!!!

Listen to this article

ಮಾಜಿ ರಾಜ್ಯಪಾಲರಾದ ಬಿ. ರಾಚಯ್ಯರವರ ಸ್ಮಾರಕ ಉದ್ಘಾಟನಾ ಸಮಾರಂಭ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಮಾಜಿ ರಾಜ್ಯಪಾಲರಾದ ದಿವಂಗತ ಬಿ. ರಾಚಯ್ಯ ರವರ ಸ್ಮಾರಕ ಉದ್ಘಾಟನೆ ಸಮಾರಂಭವು ತಾಲೂಕಿನ ಆಲೂರು ಗ್ರಾಮದಲ್ಲಿ ಆಗಸ್ಟ್ 10ರಂದು ಆಯೋಜಿತವಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಹಾಗೂ ಇತರೆ ಗಣ್ಯರು ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲಾ ಸಿದ್ದತೆಗಳನ್ನು ಅಧಿಕಾರಿಗಳು ಶೀಘ್ರ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮುಖ್ಯಮಂತ್ರಿಗಳ ಜಿಲ್ಲಾ ಭೇಟಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣ್ಯರ ಸ್ವಾಗತ, ವೇದಿಕೆ ಅಲಂಕಾರ, ಇನ್ನಿತರ ಎಲ್ಲಾ ಸಿದ್ದತೆಗಳನ್ನು ಪರಿಶೀಲಿಸಿಕೊಳ್ಳಬೇಕು. ವಿದ್ಯುತ್ ವ್ಯವಸ್ಥೆಯ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಮುಂಚಿತವಾಗಿಯೇ ಭೇಟಿ ನೀಡಿ ಸಮರ್ಪಕವಾಗಿರುವ ಬಗ್ಗೆ ದೃಢೀಕರಿಸಬೇಕು. ಛಾಯಾಚಿತ್ರ ಪ್ರದರ್ಶನ, ಇನ್ನಿತರ ಕಾರ್ಯಕ್ರಮಗಳ ಸಿದ್ದತೆಗೆ ನಿಯೋಜಿತರಾಗಿರುವ ಅಧಿಕಾರಿಗಳು ಎಲ್ಲಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಹಾಗೂ ವಾಹನಗಳಿಗೆ ಸುಗಮ ಸಂಚಾರಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಮುಂಜಾಗ್ರತವಾಗಿ ಕೈಗೊಳ್ಳಬೇಕು. ಸಮಾರಂಭದ ಸ್ಥಳದಲ್ಲಿ ಕುಡಿಯುವ ನೀರು, ಮೊಬೈಲ್ ಶೌಚಾಲಯಗಳ ವ್ಯವಸ್ಥೆಯಾಗಬೇಕು. ಆಸನಗಳ ವ್ಯವಸ್ಥೆ,  ಪಾಲನೆಗೆ ನಿಯೋಜಿತರಾಗಿರುವ ಅಧಿಕಾರಿಗಳು ಸಂಬಂಧಿಸಿದ ಕೆಲಸಗಳನ್ನು ಜವಾಬ್ದಾರಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಕಾರ್ಯಕ್ರಮಕ್ಕಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳು ಪೂರ್ವಭಾವಿಯಾಗಿ ಕಾರ್ಯಕ್ರಮದ ಸ್ಥಳಕ್ಕೆ ತೆರಳಿ ಎಲ್ಲಾ ಸಿದ್ದತೆಗಳನ್ನ ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕಾರ್ಯಕ್ರಮ ಯಶಸ್ವಿಗೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಜಿಲ್ಲಾ  ಪೋಲೀಸ್ ವರಿಷ್ಟಧಿಕಾರಿ  ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ಡಿವೈಎಸ್ಪಿಗಳಾದ ಲಕ್ಷ್ಮಯ್ಯ, ಧಮೇಂದ್ರ, ತಹಶೀಲ್ದಾರರಾದ ಮಂಜುಳಾ, ಗಿರಿಜಾ, ಜಯಪ್ರಕಾಶ್, ರಮೇಶ್‍ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಂಜುಳಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend