ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ…!!!

Listen to this article

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ
ಚಿತ್ರದುರ್ಗ:ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.


ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಹಣಿ ಆಧಾರ್ ಜೋಡಣೆ ಹಾಲಿ ಶೇ.48ರಷ್ಟು ಪ್ರಗತಿ ಸಾಧಿಸಲಾಗಿದ್ದು, ತಿಂಗಳಾಂತ್ಯದೊಳಗೆ ಶೇ.75ಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಸರ್ಕಾರಿ ಆಸ್ತಿ ಸಂಗ್ರಹಿಸಲು ಡಿಜಿಟಲ್ ಪೆನ್ಸಿಂಗ್ ಪೂರೈಸಲು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಭೂಮಿ ರ್ಯಾಂಕಿಂಗ್‍ನಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಹಕ್ಕು ಬದಲಾವಣೆ ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಹೇಳಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳಿಗೆ ಎನ್‍ಪಿಸಿ ಮ್ಯಾಪಿಂಗ್ ಹಾಗೂ ಆಧಾರ್ ಜೋಡಣೆಯನ್ನು ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಕ್ರಮವಹಿಸಲು ಸೂಚಿಸಿದರು.
ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಕೃಷ್ಣಪ್ಪ, ಉಪ ತಹಶೀಲ್ದಾರ್‍ಗಳು, ಶಿರಸ್ತೆದಾರರು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಇದ್ದರು.
ಹಿರಿಯೂರು ನಗರಸಭೆ ಪ್ರಗತಿ ಪರಿಶೀಲನಾ ಸಭೆ: ಕುಡಿಯುವ ನೀರು ಕಲುಷಿತವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಿತವಾಗಿ ಕುಡಿಯುವ ನೀರನ್ನು ಪರೀಕ್ಷೆ ಮಾಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಸ್ವಚ್ಛತೆ, ನೀರು ಸರಬರಾಜು, ಬೀದಿದೀಪಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ದೂರುಗಳು ಬಾರದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಗರಸಭೆ ವ್ಯಾಪ್ತಿಯ 15ನೇ ಹಣಕಾಸು ಯೋಜನೆ, ಸ್ವಚ್ಛ ಭಾರತ್ ಮಿಷನ್ 1 ಮತ್ತು 2 ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು…

ವರದಿ. ಪ್ರದೀಪ್ ಚಿತ್ರದುರ್ಗ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend