ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ…!!!

Listen to this article

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ
ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಲಕ್ಕೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ನಡೆಸಲಾಯಿತು.
ಭೂ ಮಾಪನಾ ಇಲಾಖೆ ಸೂಪರ್‍ವೈಸರ್ ರಮೇಶ್ ಮಾತನಾಡಿ, ಸ್ವಾಮಿತ್ವ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಿಂದ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್‍ಗಳನ್ನು (ಹಕ್ಕು ಪತ್ರ) ನೀಡುವ ಯೋಜನೆಯಾಗಿದೆ. ವ್ಯವಸಾಯ ಭೂಮಿಗಳಿಗೆ ಇರುವ ಮಾಲೀಕತ್ವದ ಪಹಣಿ, ಪಟ್ಟಾ ದಾಖಲೆಗಳಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಮಾಲೀಕತ್ವ ದಾಖಲೆಗಳನ್ನು ನೀಡುವ ಯೋಜನೆಯಾಗಿದೆ ಎಂದರು.
ಈ ಯೋಜನೆಯನ್ನು ಚಿತ್ರದುರ್ಗ ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಏಕನಾಥ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗುವುದು ಎಂದರು.
ಭೂ ಮಾಪನ ಇಲಾಖೆಯ ಪ್ರಭಾರ ಅಧೀಕ್ಷಕ ಕೆಂಪಣ್ಣ ಅವರು, ಪಿ.ಆರ್.ಕಾರ್ಡ್‍ಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ದಿಂಡಾವರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend