ಯಳಗೋಡು ಗ್ರಾಮ ಪಂಚಾಯಿತಿ: ಮಳೆ ನೀರು ಕೊಯ್ಲು, ಬೂದು ನೀರು ನಿರ್ವಹಣೆ ಕುರಿತು ತರಬೇತಿ…!!!

Listen to this article

ಯಳಗೋಡು ಗ್ರಾಮ ಪಂಚಾಯಿತಿ: ಮಳೆ ನೀರು ಕೊಯ್ಲು, ಬೂದು ನೀರು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗ:ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಮಳೆ ನೀರು ಕೊಯ್ಲು, ಬೂದು ನೀರು ನಿರ್ವಹಣೆ ಕುರಿತು ತರಬೇತಿ ನಡೆಯಿತು.
ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಬಲ ಸಂಪನ್ಮೂಲ ಸಂಸ್ಥೆ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನಡೆಯಿತು.
ತರಬೇತಿ ಕಾರ್ಯಕ್ರಮದಲ್ಲಿ ಯಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ನಾಗರಾಜ್ ಮಾತನಾಡಿ, ಯಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ನಳಸಂಪರ್ಕ ಕಲ್ಪಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧ ಹಾಗೂ ಸುರಕ್ಷಿತ ನೀರು ಕೊಡಲಾಗುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಆರ್.ಪ್ರಹ್ಲಾದ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಿಂದ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ವಿವಿಧ ಘಟಕಾಂಶಗಳನ್ನು ಅನುμÁ್ಠನ ಮಾಡಲಾಗುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಇದರ ಬಗ್ಗೆ ಮಾಹಿತಿ ತಿಳಿದುಕೊಂಡು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಮಂಜುನಾಥ ಎಸ್. ನಾಡರ್ ಮಾತನಾಡಿ, ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಜಿಎಸ್.ನಾಗರಾಜ್ ಮತ್ತು ಗುರುಮೂರ್ತಿ ಅವರು ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜಪ್ಪ, ರುದ್ರೇಶ್, ಶಾಂತಕುಮಾರ್, ಪಾಲಯ್ಯ, ರೂಪಾ ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ನೀರುಗಂಟಿಗಳು ಇದ್ದರು..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend