ಸಹಾಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಹೇಳಿಕೆ ರಾಜಕೀಯ ಒತ್ತಡಗಳಿಗೆ ಮಣಿಯದೇ ಚುನಾವಣೆ ಕಾರ್ಯ ನಿರ್ವಹಿಸಿ…!!!

Listen to this article

ಸಹಾಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಹೇಳಿಕೆ
ರಾಜಕೀಯ ಒತ್ತಡಗಳಿಗೆ ಮಣಿಯದೇ ಚುನಾವಣೆ ಕಾರ್ಯ ನಿರ್ವಹಿಸಿ
ಚಿತ್ರದುರ್ಗ: ಸಹಾರ ಸಂಘದ ಚುನಾವಣೆಗಳಲ್ಲಿ ಯಾರ ಒತ್ತಡಕ್ಕೆ ಯಾವ ರಾಜಕೀಯ ಶಿಫಾರಸ್ಸುಗಳಿಗೆ ಬಲಿಯಾಗದೆ ಕೆಲಸ ನಿರ್ವಹಿಸುವಂತೆ ಚಿತ್ರದುರ್ಗ ಯೂನಿಯನ್ನಿನ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಹೇಳಿದರು.
ಸಹಕಾರ ಇಲಾಖೆ, ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ. ಸಂಯುಕ್ತ ಆಶ್ರಯದಲ್ಲಿ ಗುರುವಾರ ಕೆಳಗೋಟೆ ಸಹಕಾರ ಭವನ ಸಭಾಂಗಣದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಟಿಎಪಿಸಿಎಂಎಸ್ ಮತ್ತು ಪಿಕಾರ್ಡ್ ಬ್ಯಾಂಕುಗಳ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ವರ್ಗದ ಜನರಿಗೆ ನ್ಯಾಯ ದೊರಕಲಿ ಎಂಬ ಚಿಂತನೆಯಿoದ ಸರ್ಕಾರ ಹಾಗೂ ಚುನಾವಣೆ ಆಯೋಗ ಆದಾಗಿನಿಂದ ಸರ್ಕಾರ ಎಲ್ಲಾ ವರ್ಗದ ಜನರಿಗೆ ಮೀಸಲಾತಿ ನಿಗದಿ ಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನೀವೆಲ್ಲರೂ ಇದಕ್ಕೆ ಬಹಳ ಮಹತ್ವ ನೀಡಬೇಕು ಎಂದು ತಿಳಿಸಿದರು.
ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಸಹಕಾರ ರತ್ನ ಪುರಸ್ಕೃತ ಜಿಂಕಲು ಬಸವರಾಜು ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಸಹಕಾರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಚುನಾವಣೆ ಇತ್ತೀಚಿನ ದಿನಗಳಲ್ಲಿ ಅನೇಕ ತಿದ್ದುಪಡಿಗಳು ಆಗುತ್ತಿವೆ. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು. ಕಾನೂನು ರೀತ್ಯಾ ಯಾವುದೇ ರೀತಿಯಲ್ಲಿ ಸಂಘವು ಸುಸ್ತಿದಾರರಾಗದಂತೆ ಸಂಘದ ಕಾರ್ಯದರ್ಶಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್‌ಕುಮಾರ್, ಆರ್.ಎಸ್. ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕ ನಿಮ್ಮಜವಾಬ್ದಾರಿ ಬಹಳ ಮುಖ್ಯ. ಕಾನೂನು ಏನು ಹೇಳುತ್ತದೆ ಅದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದರು.
ಕಾರ್ಯಗಾರದಲ್ಲಿ ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ವಿ.ಬಸವರಾಜ್, ಸಹಕಾರ ಸಂಘಗಳ ಇತ್ತೀಚಿನ ತಿದ್ದುಪಡಿ ಕಾಯ್ದೆ, ಕಾನೂನು ಮುಖ್ಯಾಂಶ ಹಾಗೂ ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಟಿಎಪಿಸಿಎಂಎಸ್ ಮತ್ತು ಪಿಕಾರ್ಡ್ ಬ್ಯಾಂಕುಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿ.ಈ.ಅಜ್ಜಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಮಹೇಶ್, ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕಿ ದಾದಾವಲಿ ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend