ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು -ಶಿಶು ಅಭಿವೃದ್ಧಿ ಯೋಜನಾಧಿಕಾ ವೀಣಾ…!!!

Listen to this article

ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು
-ಶಿಶು ಅಭಿವೃದ್ಧಿ ಯೋಜನಾಧಿಕಾ ವೀಣಾ

ಚಿತ್ರದುರ್ಗ:ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತ್, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಬಾಪೂಜಿ ಬಾಲಕರ ಹಾಗೂ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಬಾಲ್ಯವಿವಾಹ ಪ್ರಕರಣ ಹಾಗೂ ಈ ರೀತಿಯ ಮದುವೆ ಪ್ರಯತ್ನಗಳು ಕಂಡುಬoದಲ್ಲಿ ಕಾನೂನು ರೀತಿ ಶಿಕ್ಷೆಗೆ ಹಾಗೂ ದಂಡಕ್ಕೆ ಒಳಪಡಿಸಲಾಗುವುದು ಎಂದು ಹೇಳಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಧಿಕಾರಿ ಮಂಜುಳಾ ಪೋಷನ್ ಮಾಸಾಚರಣೆ ಕುರಿತು ಮಾತನಾಡಿ, ಕಿಶೋರಿಯರಿಗೆ ಅಗತ್ಯ ಇರುವ ಪೋಷಕಾಂಶಗಳ ಬಗ್ಗೆ, ಅವರ ಸಧೃಢ ಭವಿಷ್ಯಕ್ಕಾಗಿ ಆರೋಗ್ಯ ಪದ್ಧತಿಯ ಮಹತ್ವದ ಬಗ್ಗೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣಿಕೆ ತಡೆಗಟ್ಟುವಲ್ಲಿ ವಿವಿಧ ಇಲಾಖೆಗಳ ಸಹಯೋಗ ಬಹುಮುಖ್ಯ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿ ರೇಣುಕಾ ಮಾತನಾಡಿ ಕಿಶೋರಿಯರು ಮಹಿಳೆಯರು ಮತ್ತು ಮಕ್ಕಳು ತೊಂದರೆ ಸಿಲುಕಿದಲ್ಲಿ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದಲ್ಲಿ , ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿ ಸಹಾಯ ಮಾಡುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆ ಕುರಿತು ಜಾಥಾ ಸಹ ನಡೆಸಲಾಯಿತು. ವಲಯ ಮೇಲ್ವಿಚಾರಕಿ, ಪಾವನ ಆರ್, ಶಾಲೆ ಮುಖ್ಯೋಪಾಧ್ಯಯ ಪಾಪಯ್ಯ, ಸಾಧಿಕ್ ಹಾಗೂ ನಗರ ಸಭೆ ಸದಸ್ಯ ದೀಪಕ್ ಸೇರಿದಂತೆ ಶಾಲಾ ಸಿಬ್ಬಂದಿ, ಅಂಗನವಾಡಿ , ಆರೋಗ್ಯ , ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend