ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್…!!!

Listen to this article

ಬಹು ಜಿಲ್ಲೆಗಳ ಜೀವನಾಡಿ ಭದ್ರೆಗೆ ಬಾಗಿನ ಅರ್ಪಣೆ,
ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ. ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ ನೀರು ಖಾತರಿಯಾಗಿದ್ದು ಭದ್ರಾ ಜಲಾಶಯದಿಂದ ಎಲ್ಲಾ ರೈತರ ಒಳಿತಿಗಾಗಿ ಬಾಗಿನ ಅರ್ಪಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಭಾನುವಾರ ಭದ್ರಾ ಜಲಾಶಯದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಬಸವರಾಜ್ ವಿ.ಶಿವಗಂಗಾ, ಲತಾ ಮಲ್ಲಿಕಾರ್ಜುನ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಬಾಗಿನ ಸಮರ್ಪಣೆ ಮಾಡಿ ಮಾತನಾಡಿದರು.


ಭದ್ರಾ ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಮತ್ತು ತುಂಗಭದ್ರಾ ನದಿ ಮೂಲಕ ಈ ನೀರು ಹೊಸಪೇಟೆ ಜಲಾಶಯ ಸೇರಲಿದೆ, ಇವೆರಡು ಜಿಲ್ಲೆಯ ಜೀವನಾಡಿಯಾಗಿವೆ. ಜಲಾಶಯ ಭರ್ತಿಯಿಂದ ಒಳ್ಳೆಯ ಬೆಳೆಯಾಗಿ ಇದಕ್ಕೆ ಸೂಕ್ತ ಬೆಲೆಯು ರೈತರಿಗೆ ಸಿಗಲೆಂದು ಹಾರೈಸಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಭದ್ರಾ ಅಧೀಕ್ಷಕ ಎಂಜಿನಿಯರ್ ಸುಜಾತಾ ಸೇರಿದಂತೆ ಅನೇಕ ರೈತ ಮುಖಂಡರು, ಸಹಸ್ರಾರು ರೈತರು ಭಾಗವಹಿಸಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend