ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ…!!!

Listen to this article

ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ
ಧಾರವಾಡ : ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುರುಕಾಗಿರುವ ನಗರದ ಪೊಲೀಸರು, ಇದೀಗ ಸಮಾಜಘಾತುಕ ಶಕ್ತಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ ಆರಂಭಿಸಿದ್ದಾರೆ.
ನಗರದಲ್ಲಿನ ರೌಡಿ ಶೀಟರ್‌ಗಳ ಮನೆಗಳಿಗೆ ಬೆಳ್ಳಂಬೆಳಗ್ಗೆ ತೆರಳಿ ಜಾಲಾಡಿರುವ ಪೊಲೀಸರು ಯಾವುದೇ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ತಾಕೀತು ಮಾಡಿದ್ದಾರೆ.
ಎಸಿಪಿ ಬಿ.ಬಸವರಾಜ ಅವರ ಮಾರ್ಗದರ್ಶನದಲ್ಲಿ ನಗರದ ೩೨ ಕ್ಕೂ ಹೆಚ್ಚು ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.
ಶಹರ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ವಿಶ್ವನಾಥ ಚೌಗಲೆ, ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಹಾಗೂ ಉಪನಗರ ಠಾಣೆಯ ಪಿಐ ದಯಾನಂದ ಶೇಗುಣಿಸಿ ನೇತೃತ್ವದಲ್ಲಿ ಸಿಬ್ಬಂದಿ ರೌಡಿಗಳ ಮನೆಗಳ ಬಾಗಿಲು ತಟ್ಟಿದ್ದಾರೆ.
ದಾಳಿ ವೇಳೆ ಮಾರಕಾಸ್ತ್ರಗಳು ಮತ್ತು ಇನ್ನಿತರ ನಿಷೇಧಿತ ಮಾದಕ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಸ್ವಲ್ಪ ಪ್ರಮಾಣದ ಗಾಂಜಾ ಲಭ್ಯವಾಗಿದೆ ಎನ್ನಲಾಗಿದೆ.
ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಂತೆ ರೌಡಿ ಶೀಟರ್ ಗಳಿಗೆ ಅಧಿಕಾರಿಗಳು ಎಚ್ಚರಿಕೆ ಕೂಡ ನೀಡಿದ್ದಾರೆ.
ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಸಂದೇಶವನ್ನು ಪೊಲೀಸರು ನೀಡುವ ಮೂಲಕ ರೌಡಿಗಳ ನಿಗ್ರಹಕ್ಕೆ ಮುಂದಾಗಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಎರಡು ಭೀಕರ ಕೊಲೆಗಳು, ಇನ್ನಿತರ ಅಪರಾಧ ಕೃತ್ಯಗಳನ್ನು ತಡೆಯುವ ದಿಸೆಯಲ್ಲಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.
ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ ಅವರು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೂಡ ನೀಡಿದ್ದು, ಸಾರ್ವಜನಿಕರು ಭಯ ಬೀಳದಂತ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಜನತೆ ಕೂಡಾ ಪೊಲೀಸರಿಗೆ ಸಕಾಲಕ್ಕೆ ಸೂಕ್ತ ಮಾಹಿತಿ ನೀಡುವುದು ಮೂಲಕ ಅಗತ್ಯ ಸಹಕಾರ ಒದಗಿಸಬೇಕು. ಮತ್ತು ಸಾಕಷ್ಟು ಜಾಗೃತಿ ವಿಧಿಸಿಬೇಕು. ಈ ಮೂಲಕ ಅಹಿತಕರ ಘಟನೆಗಳನ್ನು ತಡೆಯುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಎಸಿಪಿ ಬಿ.ಬಸವರಾಜ ತಿಳಿಸಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend