ಚೆಳ್ಳಗುರ್ಕಿ ಎರ್ರಿಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಉಚಿತ ರಕ್ತದಾನ ಶಿಬಿರ; ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ…!!!

Listen to this article

ಚೆಳ್ಳಗುರ್ಕಿ ಎರ್ರಿಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಉಚಿತ ರಕ್ತದಾನ ಶಿಬಿರ; ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ

ಬಳ್ಳಾರಿ:ಇದೇ ಜೂ.12, 13 ರಂದು ಜರುಗುವ ಬಳ್ಳಾರಿ ತಾಲ್ಲೂಕಿನ ಚೆಳ್ಳಗುರ್ಕಿ ಗ್ರಾಮದ ಶ್ರೀ ಎರ್ರಿಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ಉಚಿತ ರಕ್ತದಾನ ಶಿಬಿರವನ್ನು ಚೆಳ್ಳಗುರ್ಕಿ ಗ್ರಾಮದಲ್ಲಿ 2 ದಿನಗಳ ಕಾಲ ಏರ್ಪಡಿಸಲಾಗಿದ್ದು, ಜಾತ್ರೆಗೆ ಆಗಮಿಸುವ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪುರುಷ ಮತ್ತು ಮಹಿಳಾ ಭಕ್ತಾಧಿಗಳು ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮನವಿ ಮಾಡಿದರು.
ಅವರು, ಮಂಗಳವಾರದಂದು ಚೆಳ್ಳಗುರ್ಕಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರÀಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚೆಳ್ಳಗುರ್ಕಿ ಗ್ರಾಮ ಪಂಚಾಯತ್, ಜಿಲ್ಲಾ ರಕ್ತ ಸುರಕ್ಷತಾ ಟಾಸ್ಕ್ ಪೆÇೀರ್ಸ್ ಸಮಿತಿ, ಏಡ್ಸ್ ನಿಯಂತ್ರಣ ಘಟಕ ಮತ್ತು ಶ್ರೀ ಎರ್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್, ಸ್ವಾಮಿ ವಿವೇಕಾನಂದ ಬ್ಲಡ್ ಬ್ಯಾಂಕ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಕನಿಷ್ಟ 400 ಯುನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದ್ದು, ಈ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಜಾತ್ರೆಗೆ ಆಗಮಿಸುವ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಭಕ್ತಾಧಿಗಳು ರಕ್ತದಾನ ಮಾಡುವಂತೆ ವಿನಂತಿಸಿದರು.


ರಕ್ತಹೀನತೆಯಿಂದ ಬಳಲುವ ಗರ್ಭಿಣಿ ಸ್ತ್ರೀಯರಿಗೆ, ಶಸ್ತ್ರಚಿಕಿತ್ಸಾ ಹೆರಿಗೆ ವೇಳೆ ಮತ್ತು ಅಪಘಾತ, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭದಲ್ಲಿ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಥ್ಯಾಲಿಸೀಮಿಯಾ, ಹಿಮೋಫಿಲಿಯಾ ಮುಂತಾದ ರೋಗಿಗಳ ಜೀವವನ್ನು ಉಳಿಸುವ ಪುಣ್ಯದ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಚೆಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಕಾವ್ಯಶ್ರೀ, ಸಿಬ್ಬಂದಿಯವರಾದ ಚಂದ್ರಕಲಾ, ಹುಲಿಗೇಶ್, ಸಿದ್ದರಾಮಪ್ಪ, ಕುಮಾರ್, ದುರ್ಗಮ್ಮ, ಮಂಜುನಾಥ್, ಮಂಗಳಗೌರಿ ಹಾಗೂ ಟ್ರಸ್ಟ್‍ನ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend