ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ…!!!

Listen to this article

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,:ನಗರದ 02 ಪರೀಕ್ಷಾ ಕೇಂದ್ರಗಳಲ್ಲಿ ಜೂ.22 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಡಿ-ಸಿಇಟಿ (ಡಿಪ್ಲೋಮಾ ಸಿಇಟಿ) 2024 ರ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‍ನೆಟ್ ಸೆಂಟರ್‍ಗಳು ಕಾರ್ಯನಿರ್ವಹಿಸದಂತೆ ಮುಚ್ಚಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಡಿಪ್ಲೋಮಾ ಪ್ರವೇಶ ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend