ನಾಡಪ್ರಭು ಕೆಂಪೇಗೌಡರು ಜನರ ಒಳಿತಿಗಾಗಿ ಶ್ರಮಿಸಿದವರು: ಮೇಯರ್ ಮುಲ್ಲಂಗಿ ನಂದೀಶ್…!!!

Listen to this article

ನಾಡಪ್ರಭು ಕೆಂಪೇಗೌಡರು ಜನರ ಒಳಿತಿಗಾಗಿ ಶ್ರಮಿಸಿದವರು: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ:ನವ ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರ ನಾಡಪ್ರಭು ಕೆಂಪೇಗೌಡರು ಜನ ಸಾಮಾನ್ಯರ ಒಳಿತಿಗಾಗಿ ಶ್ರಮಿಸಿದವರು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾ ಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ನಾಡದೊರೆ ಕೆಂಪೇಗೌಡ ಅವರು 52 ವರ್ಷಗಳ ಕಾಲ ಸುಧೀರ್ಘ ಆಡಳಿತ ನಡೆಸಿ, ಜನತೆಯ ಮನೆಮನಗಳಲ್ಲಿ ಅಚ್ಚಳಿಯಾಗಿ ಉಳಿದಿದ್ದಾರೆ ಎಂದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮೊದಲೇ ನಾಂದಿಯಾಡಿದವರು ಕೆಂಪೇಗೌಡರು, ಅವರ ದೂರದೃಷ್ಟಿ ಅವಿಸ್ಮರಣೀಯವಾಗಿದೆ ಎಂದು ತಿಳಿಸಿದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಸಾವಿರಾರು ಕೆರೆಗಳ ನಿರ್ಮಾತೃ. ನವ ಬೆಂಗಳೂರಿನ ನಿರ್ಮಾಣದಲ್ಲಿ ಅವರ ಪಾತ್ರ ಬಹುಮುಖ್ಯವಾಗಿದೆ ಎಂದರು.
ವಿದ್ಯಾರ್ಥಿಗಳು ಪುಸ್ತಕದೊಡನೆ ಸ್ನೇಹ ಬೆಳಸಿಕೊಂಡು, ಮೊಬೈಲ್ ಗೀಳಿಗೆ ಒಳಗಾಗದೆ ಮಹಾನ್ ಸಾಧಕರ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಹೊಸ ಯರ್ರಗುಡಿಯ ಸಹ ಶಿಕ್ಷಕರಾದ ನಂದೀಶ್ ಪುಂಡಿ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ನಾಡದೊರೆ ಕೆಂಪೇಗೌಡರು ಆತ್ಮ ವಿಶ್ವಾಸದಿಂದ ನೂತನ ಬೆಂಗಳೂರು ಮಹಾನಗರವನ್ನು ಸೃಷ್ಟಿಮಾಡಿದವರು, ಅವರು ನಡೆದಂತ ದಾರಿ ಮತ್ತು ಅವರ ಆಡಳಿತ ಆಳ್ವಿಕೆಯನ್ನು ಈ ದಿನ ಸ್ಮರಿಸುವಂತದ್ದಾಗಿದೆ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರು ಐದು ಅಂಶಗಳಾದ ಕೋಟೆ, ಪೇಟೆ, ಉದ್ಯಾನವನ, ಮಾರುಕಟ್ಟೆ ಹಾಗೂ ಕೆರೆಗಳಂತಹ ಯೋಜನೆಗಳ ಅಭಿವೃದ್ದಿ ಯೋಜನೆಗಳನ್ನು ಆಗಿನ ಕಾಲದಲ್ಲಿಯೇ ರೂಪಿಸಿದ್ದು, ಅವರ ಯೋಚನೆ ಮತ್ತು ಯೋಜನೆ ದೂರದೃಷ್ಟಿಗೆ ಸಾಕ್ಷ್ಯವಾಗಿದೆ ಎಂದು ತಿಳಿಸಿದರು.
ಕೆಂಪೇಗೌಡರಿಗು ಮತ್ತು ವಿಜಯನಗರ ಸಾಮ್ರಾಜ್ಯಕ್ಕೂ ಅವಿನಾಭಾವ ಸಂಬಂಧವಿದ್ದು, ವಿಶ್ವ ವಿಖ್ಯಾತ ಹಂಪಿಯ ವಿಜಯನಗರ ಸಾಮ್ರಾಜ್ಯದ ಉಳಿವಿಗಾಗಿ ಹೋರಾಡಿದ ಮಹಾನ್ ವೀರಯೋಧ ಅವರಗಾಗಿದ್ದಾರೆ ಎಂದರು.
ಇದಕ್ಕೂ ಮುನ್ನ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಳ್ಳಾರಿಯ ಕವಿತಾ ಗುಂಗೂರು ಅವರಿಂದ ಸುಗಮ ಸಂಗೀತಕ್ಕೆ ನೆರದಿದ್ದವರು ಚಪ್ಪಾಳೆಗೈದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಮೇಯರ್ ಡಿ.ಸುಖುಂ, ಪಾಲಿಕೆಯ ಅಧಿಕಾರಿ ಅಬ್ದುಲ್ ರೆಹಮಾನ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಿಬ್ಬಂದಿಯವರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು…

ವರದಿ. ಉಮೇಶ್, ಸಿರಿಗುಪ್ಪ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend