ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ…!!!

Listen to this article

ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ:ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾದ ಸಮೀಕ್ಷೆ ಹಿನ್ನಲೆ ಅನಂತಪುರ ರಸ್ತೆಯ ಸಮೀಕ್ಷಾ ಸಮಯದಲ್ಲಿ ಭಾಗಿಯಾಗಿ ಪರಿಶೀಲನೆ ಕೈಗೊಂಡು ಅವರು ಮಾತನಾಡಿದರು.
ಡೆಂಗ್ಯು ವೈರಾಣು ಹೊಂದಿದ ಸೋಂಕಿತ ಈಡೀಸ್ ಇಜಿಪ್ಟೆöÊ ಎಂಬ ಸೊಳ್ಳೆಯು ಕಚ್ಚಿದಾಗ ಡೆಂಗ್ಯೂ ರೋಗ ವ್ಯಕ್ತಿಯಲ್ಲಿ ಕಂಡುಬರುವ ಹಿನ್ನಲೆಯಲ್ಲಿ ಸಾರ್ವಜನಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡದ ಸಿಬ್ಬಂದಿಯವರು ಮನೆ ಭೇಟಿ ಮಾಡಿದಾಗ ಬಳಕೆಗಾಗಿ ನೀರು ತುಂಬುವ ಡ್ರಮ್ ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮುಂತಾದವುಗಳನ್ನು ವಾರಕ್ಕೊಮ್ಮೆ ನೀರು ಖಾಲಿ ಮಾಡಿ, ಸ್ವಚ್ಛಗೊಳಿಸಬೇಕು. ನೀರು ತುಂಬಿದ ನಂತರ ಮುಚ್ಚಳ ಮುಚ್ಚುವ ಇಲ್ಲವೇ, ಬಟ್ಟೆಯನ್ನು ಕಟ್ಟಬೇಕು ಎಂದು ತಿಳಿಸಿದರು.
ಈಗಾಗಲೇ ಜಿಲ್ಲಾ ಡಳಿತ ನೀಡಿರುವÀ ಅಗತ್ಯ ಸಲಹೆ ಸೂಚನೆಗಳ ಅನ್ವಯ ವೈದ್ಯಕಿಯ ತಂಡಗಳು ನರ್ಸಿಂಗ್ ವಿದ್ಯಾರ್ಥಿಗಳ ಮೂಲಕ ತಂಡ ರಚಿಸಿ ಪ್ರತಿ ತಂಡಕ್ಕೆ 100 ಮನೆಯಂತೆ ಸಮೀಕ್ಷೆ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ನೀಡುವ ಕಾರ್ಯ ನಡೆಯುತ್ತಿದೆ ಎಂದರು.
ಕೇವಲ ಮನೆಗಳಲ್ಲಿ ಮಾತ್ರವಲ್ಲದೇ ಶಾಲೆ, ಅಂಗನವಾಡಿಗಳು, ವಾಣಿಜ್ಯ ಮಳಿಗೆಗಳಲ್ಲಿ ನೀರು ಸಂಗ್ರಹಾರಕಗಳನ್ನು ಪರಿಶೀಲಿಸಿ, ಲಾರ್ವಾ ಕಂಡುಬAದಲ್ಲಿ ಟೆಮೋಫಾಸ್ ದ್ರಾವಣವನ್ನು ಬಳಕೆಗಾಗಿ ನೀರು ತುಂಬುವ ಪರಿಕರಗಳಿಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಾಕಲು ಸೂಚಿಸಿಲಾಗಿದೆ ಎಂದರು.
ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ ಇದಾಗಿರುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ವಯೋವೃದ್ದರು, ಗರ್ಭಿಣಿಯರು ಸೇರಿದಂತೆ ಇತರರು ಮೈತುಂಬ ಬಟ್ಟೆ ಧರಿಸಬೇಕು. ಅಗತ್ಯವೆನಿಸಿದರೆ ಸೊಳ್ಳೆ ಪರದೆ ಬಳಸಲು ಸೂಚಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಲಭ್ಯವಿದ್ದು, ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಜ್ವರ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕೀಟಶಾಸ್ತçಜ್ಞೆ ಡಾ.ನಂದಾ ಕಡಿ, ಡಾ.ಶರತ್ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend