ಗ್ರಾಮ ಪಂಚಾಯತ್‌ವಾರು ಸಭೆ ಮಾಡಿ; ಅಲ್ಪಸಂಖ್ಯಾತ ಸಮುದಾಯಕ್ಕೆ ಯೋಜನೆಗಳ ಮಾಹಿತಿ ಒದಗಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ…!!!

Listen to this article

ಗ್ರಾಮ ಪಂಚಾಯತ್‌ವಾರು ಸಭೆ ಮಾಡಿ; ಅಲ್ಪಸಂಖ್ಯಾತ ಸಮುದಾಯಕ್ಕೆ ಯೋಜನೆಗಳ ಮಾಹಿತಿ ಒದಗಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ:ವಿವಿಧ ಇಲಾಖೆಗಳು ನೀಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅರ್ಹ ಅಲ್ಪಸಂಖ್ಯಾತರಿಗೆ ತಲುಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಪಂ ವಾರು ಸಭೆ ಜರುಗಿಸಿ, ಯೋಜನೆಗಳ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರದoದು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ತಲುಪಿಸುವ ವಿವಿಧ ಇಲಾಖೆ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡಬೇಕು. ಅರ್ಹರಿಗೆ ಸೌಲಭ್ಯ ನೀಡಬೇಕು ಎಂದರು.
ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳ ಪ್ರಯೋಜನ ಪಡೆದಿರುವವರ ವಿವರಗಳನ್ನು ದಾಖಲಿಸಿ, ನಿರ್ವಹಿಸಬೇಕು. ಹೊಸ ಫಲಾನುಭವಿಗಳಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರಿಗೆ ಸೀಗಬೇಕಾದ ಸೌಲಭ್ಯ ಮತ್ತು ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಬರುವ ಅಲ್ಪ ಸಂಖ್ಯಾತ ಸಮುದಾಯಗಳ ಪ್ರದೇಶಗಳಲ್ಲಿ ವಿವಿಧ ಇಲಾಖೆಗಳ ಸಹಯೋಗ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಗ್ರಾಮಗಳ ಮಟ್ಟದಲ್ಲಿ ಮಾಹಿತಿ ಸಭೆ ಆಯೋಜಿಸಬೇಕೆಂದು ಅವರು ಹೇಳಿದರು.
2024-25 ನೇ ಸಾಲಿಗೆ ನಿಗಧಿತ ಗುರಿಗೆ ಎಲ್ಲ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಸವಲತ್ತುಗಳನ್ನು ತಲುಪಿಸುವ ಕಡೆ ಅಧಿಕಾರಿಗಳು ಗಮನಹರಿಸಬೇಕು. ಪ್ರತಿಯೊಬ್ಬ ನಾಗರಿಕರಿಗೂ ಎಲ್ಲ ಯೋಜನೆಗಳು ಮಾಹಿತಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅಲ್ಪಸಂಖ್ಯಾತರ ಸಮುದಾಯದವರಿಗೆ ಸಮರ್ಪಕವಾಗಿ ತಲುಪುತ್ತಿದೆಯೇ ಎಂದು ಅವರು ಸಂಬoಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ವಿಚಾರಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಇಲಾಖಾವಾರು ಪ್ರಗತಿ ವರದಿ ಸಲ್ಲಿಸಿದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend