ಬಾಲ ಹುಳುಗಳನ್ನು ನಿರ್ಲಕ್ಷ್ಯ ಮಾಡಬೇಡಿ, ಅವು ಡೆಂಗ್ಯು ಹರಡುವ ಸೊಳ್ಳೆ ಮರಿಗಳು: ಡಾ.ಯಲ್ಲಾ ರಮೇಶ್‌ಬಾಬು…!!!

Listen to this article

ಬಾಲ ಹುಳುಗಳನ್ನು ನಿರ್ಲಕ್ಷ್ಯ ಮಾಡಬೇಡಿ, ಅವು ಡೆಂಗ್ಯು ಹರಡುವ ಸೊಳ್ಳೆ ಮರಿಗಳು: ಡಾ.ಯಲ್ಲಾ ರಮೇಶ್‌ಬಾಬು

ಬಳ್ಳಾರಿ,:ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ ಸೇರಿದಂತೆ ಯಾವುದೇ ನೀರಿನ ಸಂಗ್ರಹಾರಕಗಳಲ್ಲಿ ಕಂಡುಬರುವ ಬಾಲ ಹುಳುಗಳನ್ನು ನಿರ್ಲಕ್ಷ್ಯ ಮಾಡಬಾರದು, ಅವು ಡೆಂಗ್ಯು ಹರಡುವ ಸೊಳ್ಳೆ ಮರಿಗಳಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗದ ವತಿಯಿಂದ ಸಿದ್ದಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸೋಮವಾರದಂದು ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಈಡೀಸ್ ಲಾರ್ವಾ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ನೀರಿನ ಅವಶ್ಯಕತೆ ಇದ್ದು, ಸಾಮಾನ್ಯವಾಗಿ ಕುಡಿಯಲು ಹೊರತುಪಡಿಸಿ ಬಳಕೆಗಾಗಿ ನೀರು ಸಂಗ್ರಹಿಸುವ ಡ್ರಮ್, ಬ್ಯಾರೆಲ್, ಕಲ್ಲಿನದೋಣಿ, ಸಿಮೆಂಟ್ ತೊಟ್ಟಿ ಹಾಗೂ ಬೀಸಾಡಿದ ಟೈರ್, ತಗಡಿನ್ ಟಿನ್, ಹೂವಿನ ಕುಂಡಲು, ಫ್ರೀಜ್ ಹಿಂಭಾಗದ ನೀರಿನಲ್ಲಿ ಕಂಡುಬರುವ ಬಾಲದ ಹುಳುವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. 7 ದಿನಗಳಲ್ಲಿ ಸೊಳ್ಳೆಯಾಗಿ ನಮ್ಮನ್ನೆ ಕಚ್ಚುವ ಡೆಂಗ್ಯೂ ರೋಗ ಹರಡುವ ಈಡೀಸ್ ಸೊಳ್ಳೆಯ ಮರಿಯಾಗಿರುತ್ತದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರು ತಮ್ಮ ಮನೆಗೆ ಬಳಕೆಗಾಗಿ ನೀರು ತುಂಬುವ ಈ ಎಲ್ಲಾ ಪರಿಕರಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಿ, ನೀರು ತುಂಬಿದ ನಂತರ ಸರಿಯಾಗಿ ಮುಚ್ಚಳ ಮುಚ್ಚಿ ಹಾಗೂ ಅನಗತ್ಯವಾಗಿ ನೀರು ನಿಲ್ಲುವ ಪರಿಕರಗಳನ್ನು ವಾರಕ್ಕೊಮ್ಮೆ ಪರೀಕ್ಷಿಸಬೇಕು. ಸೊಳ್ಳೆ ಮರಿ ಉಂಟಾಗದoತೆ ತಡೆಯುವ ಮೂಲಕ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.


ಪ್ರಸ್ತುತ ದಿನಬಿಟ್ಟು ದಿನ ಮಳೆ ಬರುತ್ತಿದ್ದು, ಬೇಡವಾದ ವಸ್ತುಗಳಲ್ಲಿ ನೀರು ಸಂಗ್ರಹಣೆಗೊoಡು ಡೆಂಗ್ಯೂ ಮತ್ತು ಚಿಕಿನ್ ಗುನ್ಯಾ ಹರಡುವ ಸೊಳ್ಳೆಗಳ ಉತ್ಪತ್ತಿ ತಡೆಯಬೇಕು. ಜೊತೆಗೆ ಮಲೇರಿಯಾ, ಮೆದುಳು ಜ್ವರ, ಆನೆಕಾಲು ರೋಗ, ಡೆಂಗ್ಯೂ, ಚಿಕಿನ್ ಗುನ್ಯಾ ಮತ್ತು ಇತ್ತೀಚಿಗೆ ಕಂಡು ಬರುತ್ತಿರುವ ಝೀಕಾ ವೈರಸ್ ರೋಗಗಳನ್ನು ತಡೆಗಟ್ಟಲು ಕುರಿತಂತೆ ವ್ಯಾಪಕವಾಗಿ ಜಾಗೃತಿ ನೀಡಲಾಗುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ವಿನಂತಿಸಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್ ಅಬ್ದುಲ್ಲಾ ಅವರು ಮಾತನಾಡಿ, ಸಾರ್ವಜನಿಕರು ಡೆಂಗ್ಯೂ ಕಾಯಿಲೆಯ ಲಕ್ಷಣಗಳಾದ ಜ್ವರ, ಕಣ್ಣು ಕೆಂಪಾಗುವಿಕೆ, ಕಣ್ಣಿನ ಹಿಂಭಾಗದಲ್ಲಿ ನೋವು, ತಲೆನೋವು, ಗಂಧೆಗಳು, ಕೀಲುಗಳಲ್ಲಿ ನೋವು, ಸ್ನಾಯುಗಳಲ್ಲಿ ನೋವು ಕಂಡುಬoದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತಪ್ಪದೇ ಭೇಟಿ ನೀಡಬೇಕು ಎಂದರು.
ಹೆಚ್ಚು ದಿನಗಳ ಕಾಲ ನೀರು ಸಂಗ್ರಹವಿರುವ ಸ್ಥಳಗಳಲ್ಲಿ ಗಪ್ಪಿ ಮತ್ತು ಗಾಂಬೋಷಿಯ ಮೀನುಗಳನ್ನು ಬಿಡಲು ಅವಕಾಶವಿದ್ದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮೀನುಗಳನ್ನು ಪಡೆದು ನೀರಿನ ತಾಣಗಳಲ್ಲಿ ಬಿಡಲು ಹಾಗೂ ಮನೆಯ ಮುಂದೆ ಸ್ವಚ್ಛಗೊಳಿಸಲಾಗದ ನೀರಿನ ಪರಿಕರಗಳಿಗೆ ಟೆಮಿಫಾಸ್ ದ್ರಾವಣವನ್ನು ತಮ್ಮ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಭೇಟಿ ನೀಡಿದಾಗ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೀಟಶಾಸ್ತçಜ್ಞರಾದ ನಂದಾ ಕಡಿ, ವೈದ್ಯಾಧಿಕಾರಿ ಡಾ.ದಿವ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎಪಡಮಾಲಜಿಷ್ಟ್ ಡಾ.ನಿವೇದಿತಾ, ಕಾಲರಾ ನಿಯಂತ್ರಣ ತಂಡದ ತಿಪ್ಪೇಸ್ವಾಮಿ, ಸವಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಮರಿಬಸವನಗೌಡ, ಎಮ್‌ಟಿಎಸ್ ಶ್ವೇತಾ, ಬಾಬುರಾವ್ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend