ತಂಬಾಕು ಸೇವೆನೆಯಿಂದಾಗುವ ದುಷ್ಟಾರಿಣಾಮದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಎ ದಯಾನಂದ…!!!

Listen to this article

ಪತ್ರಿಕಾ ಪ್ರಕಟಣೆ

ತಂಬಾಕು ಸೇವೆನೆಯಿಂದಾಗುವ ದುಷ್ಟಾರಿಣಾಮದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಎ ದಯಾನಂದ
ಬೆಂಗಳೂರು ನಗರ ಜಿಲ್ಲೆ…, ಸೆಪ್ಟೆಂಬರ್ : ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸುವ ಸಲುವಾಗಿ ತಂಬಾಕು ನಿಯಂತ್ರಣ ಅರಿವು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯುವಕರಲ್ಲಿ ಅರಿವು ಮೂಡಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ ದಯಾನಂದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಲಾದ Copta-2003 ಕಾನೂನು ಅನುಷ್ಠಾನ ಕುರಿತಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತ್ರೈಮಾಸಿಕ ಮೇಲ್ವಿಚಾರಣೆಯ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜು, ಸಾರ್ವಜನಿಕ ಸ್ಥಳಗಳು ಹಾಗೂ ತಂಬಾಕು ನಿಷೇಧ ಸ್ಥಳಗಳಲ್ಲಿ ತಂಬಾಕು ಸೇವೆನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಬಿತ್ತಿ ಪತ್ರಗಳನ್ನು ಆಂಟಿಸುವುದು, ಟಿವಿ ವಾಹಿನಿಗಳಲ್ಲಿ ಬಿತ್ತರವಾಗುವ ಧಾರವಾಹಿಗಳ ಮಧ್ಯೆ ತಂಬಾಕು ನಿಷೇಧ ಕುರಿತ ಜಾಹೀರಾತುಗಳನ್ನು ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಯುವಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ವತಿಯಿಂದ ದೇಶದ್ಯಾಂತ ಸೆಪ್ಪೆಂಬರ್ 24 ರಿಂದ ನವೆಂಬರ್ 23 ರವರೆಗೆ 60 ದಿನಗಳ ಕಾಲ ತಂಬಾಕು ಮುಕ್ತ ಯುವ ಅಭಿಯಾನ 2.0 ವನ್ನು ಹಮ್ಮಿಕೊಳ್ಳಲಾಗಿದೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ 160 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳು ಹಾಗೂ 20 ಗ್ರಾಮ ಪಂಚಾಯಿತಿಗಳಲ್ಲಿ ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರವೀಂದ್ರನಾಥ್ ಎನ್ ಮೇಟಿ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಸ್ತ್ರ ಚಿಕಿತ್ಸಾಕರಾದ ಡಾ. ಸುರೇಶ್ ಬಿ.ವಿ, ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ/ಕಾರ್ಯಾಕ್ರಮಾಧಿಕಾರಿಗಳಾದ ಡಾ.ಶರತ್ ಬಾಬು, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅನೇಕಲ್ ತಾಲ್ಲೂಕಿನ ಆರೋಗ್ಯಧಿಕಾರಿಗಳಾದ ಡಾ.ರವಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend