ಸತತವಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ…!!!

Listen to this article

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ, ಐತಿಹಾಸಿಕ ಪ್ರಮಾಣ ವಚನದೊಂದಿಗೆ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇಂದು ಸಂಜೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗಣ್ಯರು ಮತ್ತು ವಿಶೇಷ ಆಹ್ವಾನಿತರಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳ ನಾಯಕರು ಸೇರಿದ್ದಾರೆ.

ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು  ಅವರ ಸಾಧನೆಯನ್ನು ಸರಿಗಟ್ಟುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ  ಇಂದು (ಜೂನ್ 9) ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಸತತ 3 ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿಯಾಗಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು 1952, 1957 ಮತ್ತು 1962ರ ಲೋಕಸಭೆ ಚುನಾವಣೆಗಳಲ್ಲಿ ಗೆದ್ದಿದ್ದರು.

2024ರ ತೀವ್ರ ಪೈಪೋಟಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್​ಡಿಎ ಒಕ್ಕೂಟದ ಗೆಲುವಿನ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ದ್ರೌಪದಿ ಮುರ್ಮು ಇಂದು ಸಂಜೆ ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. 73 ವರ್ಷದ ನರೇಂದ್ರ ಮೋದಿ ಮೊದಲು 2014ರಲ್ಲಿ ಪ್ರಧಾನಿಯಾಗಿದ್ದರು ಮತ್ತು ನಂತರ 2019ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದರು.ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಪ್ರಮುಖ ನಾಯಕರಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೆ ಮತ್ತು ವೈಸ್ -ಸೆಶೆಲ್ಸ್ ಅಧ್ಯಕ್ಷ ಅಹ್ಮದ್ ಅಫೀಫ್- ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿದ್ದರು.ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂದ ಸೋನೋವಾಲ್, ರಾಜೀವ್ ರಂಜನ್ (ಲಾಲನ್) ಸಿಂಗ್, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ, ಗಜೇಂದ್ರ ಸಿಂಗ್ ಶೇಖಾವತ್, ಎಚ್‌ಡಿ ಕುಮಾರಸ್ವಾಮಿ ಮತ್ತು ಮನ್ಸುಖ್ ಮಾಂಡವೀಯ ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend