ನಟ ದರ್ಶನ್ ಅಭಿಮಾನಿಗಳಿಗೆ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮಿ…!!!

Listen to this article

ನನ್ನ ಪ್ರೀತಿಯ ಸಹೋದರರೇ,

ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.

ಸತ್ಯಮೇವ ಜಯತೆ! ಅಂತ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ, ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend