ಸ್ವಾತಂತ್ರ್ಯ ದಿನದಂದು ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ : ತುಷಾರ್ ಗಿರಿನಾಥ್…!!!

Listen to this article

ಸ್ವಾತಂತ್ರ್ಯ ದಿನದಂದು ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ : ತುಷಾರ್ ಗಿರಿನಾಥ್

ಬೆಂಗಳೂರು ನಗರ ಜಿಲ್ಲೆ, : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮಿಸಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಹೇಳಿದರು.
ಇಂದು ನಗರ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆ ಕುರಿತು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
78ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆಗಳನ್ನು ವೀಕ್ಷಿಸಿದ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಗೋವಾ ಪೊಲೀಸ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಅಗ್ನಿ ಶಾಮಕ ದಳದ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ಸೇರಿದಂತೆ 35 ತುಕುಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಾನ್ಯ ಮುಖ್ಯಮಂತ್ರಿಗಳು ಬೆಳಿಗ್ಗೆ 8-30 ಗಂಟೆಗೆ ಆಗಮಿಸಿ, 9-00 ಗಂಟೆಗೆ ಧ್ವಜಾರೋಹಣ ಮಾಡಿ, ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ ಭಾಷಣ ಮಾಡುವರು. ಸಾರ್ವಜನಿಕರು ಬೆಳಿಗ್ಗೆ 8-30ರೊಳಗೆ ಆಗಮಿಸಿ ನಿಗದಿತ ಗ್ಯಾಲರಿಗಳಲ್ಲಿ ಆಸಿನರಾಗಬೇಕು ಎಂದ ಅವರು ಸಮಾರಂಭದಲ್ಲಿ ಅಂಗಾಂಗ ದಾನ ಮಾಡಿರುವ ಒಟ್ಟು 64 ಕುಟುಂಬ ಸದಸ್ಯರಿಗೆ ಮಾನ್ಯ ಮುಖ್ಯಮಂತ್ರಿಗಳು ಪ್ರಶಂಸಾ ಪತ್ರ ನೀಡಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ಮಾತನಾಡಿ ಮೈದಾನದ ಸುತ್ತ ಭದ್ರತೆಗಾಗಿ 10 ಡಿಸಿಪಿ, 09 ಎಸಿಪಿ, 112 ಪಿಎಸ್ಐ 510 ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿದ್ದು, 100 ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಹಾಗೂ ಎರಡು ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗಿದೆ. 2 ಅಗ್ನಿ ಶಾಮಕ ವಾಹನ, ಎರಡು ಅಂಬುಲೈನ್ಸ್, 1 ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಸ್ವಾನ ದಳಗಳನ್ನು ನಿಯೋಜಿಸಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಚಾಕು-ಚೂರಿ, ಹರಿತವಾದ ವಸ್ತುಗಳು, ತ್ರಿವರ್ಣ ಧ್ವಜ ಹೊರತುಪಡಿಸಿ ಇತರೆ ಬಾವುಟ, ತಿಂಡಿ, ತಿನಿಸು, ಮದ್ಯದ ಬಾಟಲಿ, ಮಾದಕ ವಸ್ತು, ಪಟಾಕಿ, ಸ್ಫೋಟಕ ವಸ್ತುಗಳು, ಬಣ್ಣದ ದ್ರವ, ನೀರಿನ ಬಾಟಲಿ ಹಾಗೂ ಕ್ಯಾನ್ಗಳು ಇತ್ಯಾದಿ ವಸ್ತುಗಳನ್ನು ಮೈದಾನದ ಒಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್ ರಸ್ತೆ, ಸಿ.ಟಿ.ಓ ವೃತ್ತದಿಂದ ಕೆ.ಆರ್ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ, ಎಂ.ಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಸಂಚಾರ ಮತ್ತು ವಾಹನ ನಿಲುಗಡೆಯನ್ನು ನಿಷೇಧಿಸಲಾಗಿರುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ ದಯಾನಂದ, ಸಂಚಾರ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್ ಅನುಚೇತ್, ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರಾದ ಸ್ನೇಹಲ್ ಆರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend