62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ…!!!

Listen to this article

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

ಬೆಂಗಳೂರು: ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಲೋಪದೋಷಗಳ ಕಂಡು ಬಂದಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.
ದಾಳಿ ವೇಳೆ ದಾಖಲೆ ಇಲ್ಲದೆ 2 ಲಕ್ಷ ಹಣ, ಗಾಂಜಾ ಮತ್ತು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ವರದಿಗಳು ತಿಳಿಸಿವೆ.

ಲೊಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿವೆ. ಅದೆಲ್ಲವನ್ನೂ ವಿಚಾರಣೆ ಮಾಡಲಾಗಿದ್ದು, ಜೊತೆಗೆ ಅಬಕಾರಿ ಕಚೇರಿಯ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ಸರ್ಚಿಂಗ್ ಮಾಡಲಾಗಿದೆ. ಎಸ್ಪಿಗಳು, ಡಿವೈಎಸ್ಪಿಗಳು, ಇನ್ಸ್ ಪೆಕ್ಟರ್ ಗಳು, ಜ್ಯೂಡಿಷಲ್ ಆಫೀಸರ್ಸ್ ಹಾಗೂ ನಾನು ಮತ್ತು ಉಪಲೋಕಾಯುಕ್ತರು ತಪಾಸಣೆ ನಡೆಸಿದ್ದು, ಹಲವಾರು ಲೋಪದೋಷಗಳು ಕಂಡು ಬಂದಿವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ಹೇಳಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend