ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ…!!!

Listen to this article

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

ಬೆಳಗಾವಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಬುಧವಾರ(ಜು.31) ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು.

ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸಾಕಷ್ಟು ಬದಲಾವಣೆಗಳು ಮತ್ತು ಸುಧಾರಣೆಗಳಾಗಿವೆ.

ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಆಹಾರದೊಂದಿಗೆ ಎಲ್ಲ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿರುತ್ತದೆ. ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಸುಸುಜ್ಜಿತವಾದ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸ್ಟಡಿ ಹಾಲ್ ,ಪೀಠೋಪಕರಣಗಳು ಇನ್ನಿತರ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಇದಲ್ಲದೇ ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ನೈಟ್ ಡ್ರೇಸ್ , ಟ್ರ್ಯಾಕ್ ಸೂಟ್ ಕೂಡ ನೀಡಲಾಗುತ್ತಿದೆ ಎಂದು ಶಿವಪ್ರಿಯಾ ವಿವರಿಸಿದರು.

ನಿಲಯದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಶಿವಪ್ರಿಯಾ ಕಡಾಎಚೂರ ಅವರು, ವಿದ್ಯಾರ್ಥಿಗಳಿಗೆ ಇಂದಿನ ಸ್ಥರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದರ ಬಗ್ಗೆ ಸಲಹೆಗಳನ್ನು ನೀಡಿದರು.
ಜೊತೆಗೆ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡಿಸಬೇಕೆಂದು ಒಂದು ಕಾರ್ಯಾಗಾರವನ್ನು ಏರ್ಪಡಿಸುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ವಿದ್ಯಾರ್ಥಿ ನಿಲಯದಲ್ಲಿ ದಿನಪತ್ರಿಕೆಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಮ್ಯಾಗಜಿನ್ ನಿಯಮಿತವಾಗಿ ಸರಬರಾಜು ಆಗುತ್ತಿರುವ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿ ಖಾತರಿಪಡಿಸಿಕೊಂಡರು.
ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲ ಆಗದಂತೆ ಸರಕಾರ ನೀಡಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ನಿಲಯದ ಸಿಬ್ಬಂದಿಗೆ ಸೂಚನೆಯನ್ನು ನೀಡಿದರು…

ವರದಿ. ಮಹಾಲಿಂಗ, ಎಚ್, ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend