ಕೆರೆ ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ ಸರ್ಕಾರಕ್ಕೆ 15 ದಿನಗಳ ಗಡುವು…!!!

Listen to this article

ಕೆರೆ ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ಸರ್ಕಾರಕ್ಕೆ 15 ದಿನಗಳ ಗಡುವು

ಕನಕಗಿರಿ.. ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ತುಂಬಿಸುವಲ್ಲಿ ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು

ಪ್ರತಿಭಟನಾ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಯುಭಾಗಿ ಅಧ್ಯಕ್ಷ ಪಂಪಣ್ಣ ನಾಯಕ ಅವರು ಕನಕಿರಿ ತಾಲೂಕಿನ ಎಲ್ಲಾ ಕೆರೆಗೂ ನೀರು ತುಂಬಿಸುತ್ತಿದ್ದೇವೆ ಎಂದು ಸಚಿವ ಶಿವರಾಜ್ ತಂಗಡಗಿ ಸುಳ್ಳು ಹೇಳುತ್ತಿದ್ದಾರೆ ರೈತರು ಇದನ್ನು ಸಹಿಸುವುದಿಲ್ಲ ವಾಸ್ತವದಲ್ಲಿ ಕೆರೆ ತುಂಬ ಯೋಜನೆ ವ್ಯಾಪ್ತಿಯ ಯಾವೊಂದು ತೆರೆಗೂ ನೀರು ಬರುತ್ತಿಲ್ಲ ಇದನ್ನು ಕ್ಷೇತ್ರದ ಜನರು ಸೂಕ್ಷ್ಮವಾಗಿಸಿದ್ದಾರೆ ಎಂಬುದನ್ನು ಸಚಿವ ಶಿವತಂಗಡಿಗಿ ಅವರು ಅರಿಯಬೇಕು ಕೂಡಲೇ ಕೆರೆ ತುಂಬಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮುಂದಿನ 15 ದಿನದಲ್ಲಿ ಎಲ್ಲಾ ಕೆರೆಗಳು ನೀರು ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು ಒಂದು ವೇಳೆ 15 ದಿನದೊಳಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸದಲ್ಲಿ ಹಂತ ಹಂತವಾಗಿ ಹೋರಾಟವನ್ನು ತೀವ್ರಗೊಳಿಸುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿಲ್ಲ
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಧ್ಯಕ್ಷ ಶರಣಪ್ಪ ದೊಡ್ಮನಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ರಾಜ್ಯ ಸರ್ಕಾರ ಸುಪ್ರೀಂಕೋರ್ಟಿನ ಸುತ್ತಲೇನು ಪಾಲಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ
ಸುತ್ತೋಲೆಯಲ್ಲಿ ಏನಿದೆ?
ಹೈಕೋರ್ಟ್‌ ಆದೇಶದ ಬಳಿಕ ರಾಜ್ಯ ಸರಕಾರವು ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದ್ದು, ‘ನೀರು ಇರಲಿ, ಇಲ್ಲದಿರಲಿ ಸರಕಾರಿ ಕೆರೆ, ಖರಾಬು ಕೆರೆ, ಕುಂಟೆ, ಕಟ್ಟೆ ಸೇರಿದಂತೆ ಯಾವುದೇ ಜಲ ಮೂಲ, ಜಲಕಾಯಗಳನ್ನು ಸಂರಕ್ಷಿಸಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದೆ. ಈ ಪ್ರದೇಶಗಳನ್ನು ಯಾವುದೇ ಸರಕಾರಿ ಅಥವಾ ಖಾಸಗಿ ಉದ್ದೇಶಗಳಿಗೆ ಉಪಯೋಗಿಸಿಕೊಳ್ಳಲು ಅವಕಾಶವಿರುವುದಿಲ್ಲ ಹಾಗೂ ಪುನರುಜ್ಜೀವನಕ್ಕೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದೆ…

ವರದಿ. ಲಿಂಗರಾಜ್ ತಡಕಲ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend