ಸಭೆಯಲ್ಲಿ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಸೂಚನೆ…!!!

Listen to this article

ಸಭೆಯಲ್ಲಿ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಸೂಚನೆ
ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಿ:
ರಾಯಚೂರು,:- ಕಾಯಕ ಯೋಗಿ, ಬಸವಣ್ಣವರ ಸಮಕಾಲೀನರಾದ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶ್ರೀಕೃಷ್ಣನ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಪ್ಪ ಯಲ್ಲಪ್ಪ ಭಜಂತ್ರಿ ಅವರು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು  ಬುಧವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶ್ರೀಕೃಷ್ಣನ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕಾಯಕ ಯೋಗಿ, ಬಸವಣ್ಣವರ ಸಮಕಾಲೀನರಾದ ನುಲಿಯ ಚಂದಯ್ಯನವರು ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದು ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ್ದಾರೆ. ನುಲಿಯ ಚಂದಯ್ಯ ಜಯಂತಿಯನ್ನು ಆಗಸ್ಟ್ 19ರ ಬೆಳಿಗ್ಗೆ 9ಗಂಟೆಗೆ ನಗರದ ಅಂಬೇಡ್ಕರ ವೃತ್ತದಿಂದ ರಂಗಮoದಿರವರಿಗೆ ಮೆರವಣಿಗೆ ಕಾರ್ಯಕ್ರಮ, ಬೆಳಿಗ್ಗೆ 11ಗಂಟೆಗೆ ನಗರದ ರಂಗಮoದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉಪನ್ಯಾಸಕರಾಗಿ ಮರೆಪ್ಪ ಅವರನ್ನು ಸಮಾಜ ಮುಖಂಡರು ಆಯ್ಕೆ ಮಾಡಿದರು.
ಆಗಸ್ಟ್ 20ರ ಬೆಳಿಗ್ಗೆ 9.30ಗಂಟೆಗೆ ಬಸವೇಶ್ವರ ವೃತ್ತದಿಂದ ನಗರದ ರಂಗಮoದಿರದವರಿಗೂ ಬ್ರಹ್ಮಶ್ರೀ ನಾರಾಯಣ ಗುರು ಅವರ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ವೇದಿಕೆ ಕಾರ್ಯಕ್ರಮವನ್ನು ಬೆಳಿಗ್ಗೆ 11ಗಂಟೆಗೆ ಆಯೋಜನೆ ಮಾಡಲಾಗಿದೆ.

ಆಗಸ್ಟ್ 26ರಂದು ಕೃಷ್ಣ ಜಯಂತಿ ಅಂಗವಾಗಿ ನಗರದ ನಗರೇಶ್ವರ ದೇವಸ್ಥಾನ ದಿಂದ ಯಾದವ್ ಕಲ್ಯಾಣ ಮಂಟಪದವರಿಗೂ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 12ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ವಿವಿಧ ಸಂಘಟನೆಗಳ ಮುಖಂಡರುಗಳಿಗೆ ನೀಡಿ ಆಹ್ವಾನಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಮಾಜ ಮುಖಂಡರು ಸಭೆಯಲ್ಲಿ ಇದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend