ಮಹಿಳೆಯರಿಗೆ ಗ್ರಾಮ ಪಂಚಾಯತಿಯ ಸೌಲಭ್ಯ ತಲುಪಲಿ; ವಿಜಯ ಕುಮಾರ….!!!

Listen to this article

ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ತರಬೇತಿ ಕಾರ್ಯಾಗಾರ
ಮಹಿಳೆಯರಿಗೆ ಗ್ರಾಮ ಪಂಚಾಯತಿಯ ಸೌಲಭ್ಯ ತಲುಪಲಿ; ವಿಜಯ ಕುಮಾರ
ರಾಯಚೂರು:- ಗ್ರಾಮೀಣ ಪ್ರದೇಶದಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಗ್ರಾಮ ಪಂಚಾಯತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಲು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮುಂದಾಗಬೇಕು ಎಂದು ಎನ್.ಆರ್.ಎಲ್.ಎಮ್ ಜಿಲ್ಲಾ ವ್ಯವಸ್ಥಾಪಕರಾದ ವಿಜಯ ಕುಮಾರ ಅವರು ಹೇಳಿದರು.
ಅವರು  ಬುಧವಾರ ದಂದು ನಗರದ ಆಶಾಪೂರ ರಸ್ತೆಯಲ್ಲಿರುವ ಆರ್.ಸೆ.ಟಿ ತರಬೇತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸವಂರ್ಧನ ಸಂಸ್ಥೆ, ಜಿಲ್ಲಾ ಪಂಚಾಯತ್ ರಾಯಚೂರು, ತಾಲೂಕು ಪಂಚಾಯತ್ ರಾಯಚೂರು, ತಾಲೂಕು ಸಂಜೀವಿನಿ ನಿರ್ವಹಣಾ ಘಟಕದಲ್ಲಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಲು ಹಲವಾರು ಕಾರ್ಯಕ್ರಮ ಸರಕಾರದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಗ್ರಾಮಗಳಲ್ಲಿ ವಿವಿಧ ಇಲಾಖೆಗಳಿಂದ ಮತ್ತು ಸ್ವಯಂ ಸೇವಾ ಸಂಸ್ಥೆಗಳಿAದ ರಚಿಸಲ್ಪಟ್ಟಿರುವ ಸ್ವ-ಸಹಾಯ ಸಂಘಗಳು ಕುಟುಂಬದ, ಸಮುದಾಯದ ಮತ್ತು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಉದ್ಯಮ ವಲಯದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಮಾಹಿತಿ ತಲುಪಿಸಿ ಉದ್ಯಮಶೀಲರನ್ನಾಗಿ ಮಾಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡಬೇಕು. ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಬ್ಯಾಂಕ್ ಸಂಪರ್ಕ ಕಲ್ಪಿಸಬೇಕು. ಬ್ಯಾಂಕ್ ನಿಂದ ದೊರಕುವ ವಿವಿಧ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಗ್ರಾಮಗಳ ಅಭಿವೃದ್ಧಿ ಸಾಧಿಸಲು, ಸಮುದಾಯದ ಅವಕಾಶ ವಂಚಿತರು, ದುರ್ಬಲರನ್ನು ಗುರುತಿಸಿ ಅವರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕಾಗಿದೆ. ಗ್ರಾಮದ ಯೋಜನೆಗಳನ್ನು ರೂಪಿಸುವಲ್ಲಿ ಮತ್ತು ಅದನ್ನು ಅನುಷ್ಠಾನಗೊಳಿಸುವಲ್ಲಿ ಸಮುದಾಯದ ಭಾಗವಹಿಸುವಿಕೆಯು ಪ್ರಮುಖ ಪಾತ್ರವಹಿಸುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್ ಆಪರೇಟರ್ ನಾಗನಗೌಡ, ತಾಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ರುದ್ರಮ್ಮ, ಅಮ್ಮಯ್ಯ, ಸ್ನೇಹ ಸೇರಿದಂತೆ ಎಲ್ಲಾ ಒಕ್ಕೂಟದ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು…

ವರದಿ. ನಾಗರಾಜ್ ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend