ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ…!!!

Listen to this article

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು,:- ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬoಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿoದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/ಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.

ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ  ಈಡಿ ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ನಾಗರಾಜ್, ವಿ, ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend