ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ಕರೆ…!!!

Listen to this article

ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ಕರೆ
ಹಾಸನ: ಸರ್ಕಾರದ ಇಲಾಖೆಗಳ ಜೊತೆಗೆ ಸಂಘ ಸಂಸ್ಥೆಗಳು ಕೈಜೋಡಿಸಿ ಅನಕ್ಷರಸ್ಥರಿಗೆ ಅಕ್ಷರ ಕಲಿಸಲು ಕಟಿಬದ್ಧರಾಗಿ ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತದ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಇಂದು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅವರಣದಲ್ಲಿ ಏರ್ಪಡಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಶೇ.79-80 ರಷ್ಟ್ರು ಸಾಕ್ಷರತೆ ಪ್ರಮಾಣ ಇದೆ ಎಂದು ತಿಳಿಸಿದರಲ್ಲದೆ,2022 ಪ್ರಕಾರ ರಾಜ್ಯದಲ್ಲಿ ಶೇ.80 ರಷ್ಟಿದೆ ಎಂದರು.
ಅಕ್ಷರ ಇರುವ ಕಡೆ ಅರಿವು, ತಿಳುವಳಿಕೆ ಇರುತ್ತದೆ. ಅಕ್ಷರ ಜ್ಞಾನ ಧೈರ್ಯ, ದೃಢತೆ, ಬದ್ದತೆ, ಪ್ರಾಮಾಣಿಕತೆ ಪ್ರತೀಕವಾಗಿದೆ. ಇಂತಹ ಮೌಲ್ಯಗಳನ್ನು ಅಳವಡಿಸಿಕೊಂಡು ಮೂಡನಂಬಿಕೆ, ಕಂದಾಚಾರ, ಅಂದಕಾರಗಳನ್ನು ತೊಡೆದುಹಾಕುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಮಾತನಾಡಿ 1978-79 ರಲ್ಲಿ ಸಾಕ್ಷರತಾ ಆಂದೋಲನ ಪ್ರಾರಂಭಿಸಲಾಯಿತು. ನಿರಂತರವಾಗಿ ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 30 ಸಾವಿರ ಜನರು ಈ ವರ್ಷ ಸಾಕ್ಷರರಾಗಿದ್ದಾರೆ. ಚುನಾಯಿತ ಗ್ರಾಮ ಪಂಚಾಯಿತಿ 223 ಸದಸ್ಯರಿಗೆ ಅಕ್ಷರ ಕಲಿಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
2022 ರಿಂದ 2027 ರವರಿಗೆ ಈಡಿ ಭಾರತದಲ್ಲಿ ಎಲ್ಲರೂ ಸಾಕ್ಷರರನ್ನಾಗಿ ಮಾಡಲು ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆಯೂ ಅಕ್ಷರ ಕಲಿತು ಸಾಕ್ಷರರಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮೀನಾಕ್ಷಮ್ಮ, ಜಿಲ್ಲಾ ಸಾಕ್ಷರತಾ ಅಧಿಕಾರಿ ಕಾಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ, ಕಲಾವಿದರಾದ ಗ್ಯಾರಂಟಿ ರಾಮಣ್ಣ, ಬಿ.ಟಿ.ಮಾನವ, ಎಸ್.ಎಸ್.ಪಾಷ, ಶಬ್ಬೀರ್ ಅಹಮದ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend