ಗಾಂಧಿ ಭವನ: ಸೃಜನಶೀಲಾ, ಸದಭಿರುಚಿಯ ಕಾರ್ಯಕ್ರಮಗಳಿಗೆ ಅವಕಾಶ…!!!

Listen to this article

ಗಾಂಧಿ ಭವನ: ಸೃಜನಶೀಲಾ, ಸದಭಿರುಚಿಯ ಕಾರ್ಯಕ್ರಮಗಳಿಗೆ ಅವಕಾಶ

ಹಾಸನ:- ಗಾಂಧಿ ತತ್ವಗಳಿಗೆ ಪೂರಕವಾದ ಚಟುವಟಿಕೆಗಳು, ಉಪನ್ಯಾಸಗಳು, ಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ, ಸಾಹಿತ್ಯ ಚಟುವಟಿಕೆಗಳು, ಗ್ರಾಮ ಸೇವಾ ತರಬೇತಿ ಶಿಬಿರಗಳು, ಸ್ವಯಂ ಉದ್ಯೋಗ ತರಬೇತಿ ಶಿಬಿರಗಳಂತಹ ಸೃಜನಶೀಲಾ ಹಾಗೂ ಸದಭಿರುಚಿಯ ಕಾರ್ಯಕ್ರಮಗಳನ್ನು ಗಾಂಧಿಭವನದಲ್ಲಿ ನಡೆಸಲು ಅವಕಾಶ ಕಲ್ಪಿಸಲು ತೀಮಾರ್ನಿಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿoದು ನಗರದ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಭವನದ ಬಳಕೆ ಹಾಗೂ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿ ಒಳಾಂಗಣ ಕಟ್ಟಡವನ್ನು ಉಪಯೋಗಿಸಿಕೊಳ್ಳಲು ಒಂದು ದಿನಕ್ಕೆ 8000 ರೂ.ಗಳು ಹಾಗೂ ಹೊರಾಂಗಣ ಒಳಗೊಂಡoತೆ ಕಟ್ಟಡವನ್ನು ಉಪಯೋಗಿಸಿಕೊಳ್ಳಲು 20,000 ರೂ.ಗಳ ದಿನ ಬಾಡಿಗೆಯನ್ನು ನಿಗಧಿಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಗಾಂಧಿ ಭವನವನ್ನು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕೇಂದ್ರಗಳಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳು, ಯುವಕರು, ಗಾಂಧಿವಾದಿಗಳು ಹಾಗೂ ವಿಚಾರವಾದಿಗಳ ಕ್ರಿಯಾಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಬಳಸಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಗಾಂಧಿ ಭವನದಲ್ಲಿ ಸರ್ಕಾರಿ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ ಬಾಡಿಗೆ ಆಧಾರದ ಮೇಲೆ ನೀಡಲಾಗುವುದು. ಗಾಂಧಿ ತತ್ವಗಳಿಗೆ ಪೂರಕವಾದ ಕಾರ್ಯಕ್ರಮಗಳು ಹಾಗೂ ಸಭೆಗಳನ್ನು ಆಯೋಜಿಸಲು ಮಾತ್ರ ಅನುಮತಿ ನೀಡಬಹುದಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಮಿತಿಯ ಉಪಾಧ್ಯಕ್ಷರಾದ ಬಿ.ಆರ್ ಪೂರ್ಣಿಮಾ ಸದಸ್ಯರುಗಳಾದ ಹಿರಿಯ ಸ್ವಾತಂತ್ರö್ಯ ಹೋರಾಟಗಾರರಾದ ಹೆಚ್.ಎಮ್ ಶಿವಣ್ಣ, ಹಿರಿಯ ಪತ್ರಕರ್ತರಾದ ಆರ್.ಪಿ ವೆಂಕಟೇಶ ಮೂರ್ತಿ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಪಿ ಮೋಹನ್ ಸಭೆಯಲ್ಲಿ ಹಾಜರಿದ್ದು ಹಲವು ಸಲಹೆಗಳನ್ನು ನೀಡಿದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend