ಕುಂದು ಕೊರತೆಗಳ ಪರಿಹಾರಕ್ಕೆ ಸೂಚನೆ
ಹಾಸನ.:- ನಗರದ ಆಡುವಳ್ಳಿಗೆ ಇಂದು ಶಾಸಕರಾದ ಸ್ವರೂಪ್ ಪ್ರಕಾಶ್ ಅವರು ನಗರಸಭೆ ಅಧಿಕಾರಿಗಳು, ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಗ್ರಾಮದ ಸ್ಥಳೀಯರೊಡನೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಪರಿಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.
ಆಂಜನೇಯ ಸ್ವಾಮಿ ದೇವಾಲಯವನ್ನು ಹೊಸದಾಗಿ ನಿರ್ಮಿಸಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಗೆ ಪತ್ರದ ಮುಖಾಂತರ ಅನುಮತಿ ನೀಡುವಂತೆ ಆಯುಕ್ತರನ್ನು ಕೋರಲಾಗಿತ್ತು ಅದರಂತೆ ಸಂಬoಧಪಟ್ಟ ಇಲಾಖೆಯಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲಿ ದೇವಾಲಯದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಗ್ರಾಮಸ್ಥರಿಗೆ ಶಾಸಕರಾದ ಸ್ವರೂಪ್ ಪ್ರಕಾಶ್ ಅವರು ತಿಳಿಸಿದರು.
ನಂತರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಅಭಿವೃದ್ಧಿಗಾಗಿ ಈಗಾಗಲೇ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು ಶೀಘ್ರದಲ್ಲಿ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030