ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸಿ : ಕೆ.ಎನ್ ರಾಜಣ್ಣ…!!!

Listen to this article

ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸಿ : ಕೆ.ಎನ್ ರಾಜಣ್ಣ
ಹಾಸನ:- ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸುವ ಮೂಲಕ ದೃಢವಾದ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಉತ್ತಮ ಜ್ಞಾನಗಳಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ತಿಳಿಸಿದ್ದಾರೆ.

ನಗರದ ಗಂಧದಕೋಠಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿಂದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ 55 ಲಕ್ಷ ಮಕ್ಕಳಿಗೆ ಮೊಟ್ಟೆ ನೀಡಲು ಸುಮಾರು 1,500 ಕೋಟಿ ರೂ ನೆರವು ನೀಡಲಿದೆ ಎಂದರು.

ಶಾಲಾ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಆರೋಗ್ಯವನ್ನು ನೀಡುವುದು ಸರಕಾರದ ಬದ್ದತೆಯಾಗಿದೆ. ರಾಜ್ಯದ 53.080 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 55 ಲಕ್ಷ ಮಕ್ಕಳಿಗೆ ಪೋರಕ ಪೌಷ್ಠಿಕ ಆಹಾರ ನೀಡಲು ಮುಂದೆ ಬಂದಿರುವ ಅಜೀಮ್ ಪ್ರೇಮ್‌ಜಿ ಪೌಡೇಂಶನ್ ವತಿಯಿಂದ ವಾರದ ಎಲ್ಲಾ ದಿನ ಪೂರಕ ಪೌಷ್ಠಿಕ ಆಹಾರ ಮಕ್ಕಳಿಗೆ ಸಿಗಲಿದೆ ಎಂದು ತಿಳಿಸಿದರು.

ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ 2 ದಿನ ಮೊಟ್ಟೆ ಚಿಕ್ಕಿ ಬಾಳೆಹಣ್ಣು ನೀಡಲಾಗುತ್ತಿತ್ತು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳಿಗೆ ಹಾಲು, ಶೂ, ಪುಸ್ತಕ, ಸಮವಸ್ರ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿದರು.

ವಿದ್ಯಾರ್ಥಿಗಳು ಪಠ್ಯ ಪಠ್ಯೇತರ ಚಟುವಟಿಕೆಯ ಜೊತೆಯಲ್ಲಿ ಶಿಸ್ತು ನಿಯಮಗಳನ್ನು ಅಳವಡಿಸಿಕೊಳ್ಳಬೇಕು ಇದರ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಲೆಗಳಲ್ಲಿ ಬೋರ್ಡ್ ಮೇಲೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಇವುಗಳ ಉಪಯೋಗಗಳು ಹಾಗೂ ಕ್ಯಾಲುರಿಯಸ್ ಎಷ್ಟು ಇದೆ ಎಂಬುವುದನ್ನು ಮಕ್ಕಳಿಗೆ ತಿಳಿಸಬೇಕು ಎಂದರು.

ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿoಗೇಗೌಡ, ಸಂಸದರಾದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಾಂಡು, ಶಿಕ್ಷಣ ಅಧಿಕಾರಿಗಳಾದ ಬಲರಾಮ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಅಣ್ಣಪ್ಪ, ಡಯಟ್‌ನ ಪ್ರಾಂಶುಪಾಲರಾದ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಶಾಲಾ ಮುಖ್ಯೋಪಾಧ್ಯಾನಿಯಾದ ನಿರ್ಮಲಾ, ಪ್ರಾಥಮಿಕ ಶಾಲಾ ಶಿಕ್ಷಕರಾದ ಅಣ್ಣೇಗೌಡ್ರು ಮತ್ತಿತರರು ಉಪಸ್ಥಿತಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend