ಹೊಳಲ್ಕೆರೆ: ಮುಂದಿನ ವರ್ಷದಿಂದ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ…!!!

Listen to this article

ಹೊಳಲ್ಕೆರೆ: ಮುಂದಿನ ವರ್ಷದಿಂದ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಮಾಡಲಾಗುವುದು -ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಹೇಳಿದರು.

ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ನಾನು ವಿಧಾನ ಪರಿಷತ್ ‘ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ. 28 ವರ್ಷಗಳ ಕಾಲ ಆಗದ ಕೆಲಸಗಳಿಗೆ ಕೇವಲ ಮೂರು ತಿಂಗಳಲ್ಲಿ ಚುರುಕು ನೀಡಿದ್ದೇನೆ. ಶಿಕ್ಷಕರ ಪ್ರಮುಖ ಬೇಡಿಕೆಯಾಗಿರುವ ಹಳೆಯ ಪಿಂಚಣಿ -ಯೋಜನೆ ಜಾರಿ ಬಗ್ಗೆ ಮುಖ್ಯಮಂತ್ರಿ ಜತೆ ಈಗಾಗಲೇ ಚರ್ಚಿಸಿದ್ದು, ಅವರ ಆದೇಶದಂತೆ ಈಗ ಪೂರ್ಣ ಪ್ರಮಾಣದ ಸಮಿತಿ ರಚನೆ -ಆಗಿದೆ. ಗ್ಯಾರಂಟಿ ಯೋಜನೆಗೆ ಹೆಚ್ಚು ಹಣ ಬೇಕಾಗಿರುವುದರಿಂದ ಈ ವರ್ಷ ಒಪಿಎಸ್ ಜಾರಿ ಕಷ್ಟ, ಮುಂದಿನ ವರ್ಷ ಹಣಕಾಸು ಲಭ್ಯತೆ ನೋಡಿಕೊಂಡು ಯೋಜನೆ ಜಾರಿಗೊಳಿಸಲಾಗುವುದು ಎಂದರು.

ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊ- ಳಿಸಲಾಗಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಸರ್ಕಾರಕ್ಕೆ ₹430 ಕೋಟಿ ಹೊರೆ ಆಗುತ್ತಿದ್ದರೂ, ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಿ ಆ್ಯಂಡ್ ಆರ್ ನಿಯಮ ತಿದ್ದುಪಡಿಗೂ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದರು.

ಖಾಸಗಿ ಹಾಗೂ ಅನುದಾನಿತ ಶಾಲೆಗಳನ್ನು ಪ್ರತಿ ವರ್ಷ ನವಿಕರಣಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದಲ್ಲದೆ ಸರ್ಕಾರಿ ಶಾಲೆ ಹೊರತುಪಡಿಸಿ ಖಾಸಗಿ ಶಾಲೆಗಳು ಐದು ಸುರಕ್ಷಾ ನಿಯಮಗಳನ್ನು ಅಳವಡಿ- ಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಇದರಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ನಲವತ್ತು ಐವತ್ತು ವರ್ಷದಿಂದ ಶಾಲೆ ನಡೆಸಿಕೊಂಡು ಬರುತ್ತಿರುವ ವರಿಗೆ ಬಾರಿ ಸಮಸ್ಯೆ ಆಗಿದೆ. ನ್ಯಾಯಾಲಯ ಐದು ವರ್ಷಕ್ಕೊಮ್ಮೆ ನವೀಕರಣ ಮಾಡಿಸಬಹುದು ಎಂದು ತೀರ್ಪು ನೀಡಿದ್ದರೂ, ಅದು ಪಾಲನೆ ಆಗುತ್ತಿಲ್ಲ. ಲೋಕೋಪಯೋಗಿ ಹಾಗೂ ಶಿಕ್ಷಣ ಇಲಾಖೆಗಳಿಂದ ಪ್ರತೀ ವರ್ಷ ಪ್ರಮಾಣ ಪತ್ರ ಪಡೆಯಬೇಕಾಗಿದ್ದು, ಅಲ್ಲಿನ

ಅಧಿಕಾರಿಗಳು ಲಂಚ ಕೊಟ್ಟವರಿಗೆ ಮಾತ್ರ ಪ್ರಮಾಣ ಪತ್ರ ಕೊಡುತ್ತಿದ್ದಾರೆ. ಈ ನಿಯಮದಿಂದಾಗಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದರು.

ತಹಶೀಲ್ದಾರ್ ಬೀಬಿ ಫಾತಿಮಾ, ಪುರಸಭೆ ಸದಸ್ಯ ಕೆ.ಸಿ.ರಮೇಶ್, ಬಿ.ಗಂಗಾಧರ್, ಬಿಸಿಎಂ ಕಲ್ಯಾಣಾಧಿಕಾರಿ ಪ್ರದೀಪ್ ಕುಮಾರ್, ಎ.ಜಯಪ್ಪ, ರಶೀದ್, ದೇವರಾಜ್, ಚಂದ್ರ ನಾಯ್ಸ್, ರಂಗಸ್ವಾಮಿ, ತಿಮ್ಮೇಶ್, ಕಿರಣ್ ಯಾದವ್, ವೀರೇಶ್, ಮನೋಹರ್, ಚಂದ್ರಶೇಖರ್, ರಂಗಸ್ವಾಮಿ, ಸುರೇಶ್, ಕಾಂತರಾಜು, ರವಿ, ಶಿವಣ್ಣ, ಕರಿಸಿದ್ದಪ್ಪ, ಜಗದೀಶ್, ರಮೇಶ್, ನಾಗರಾಜ್, ಇದ್ದರು.ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಶೀಘ್ರವೇಕಚೇರಿ ಆರಂಭಿಸಲಾಗುವುದು. ಶಿಕ್ಷಕರು ಯಾವುದೇ ಸಮಸ್ಯೆ ಇದ್ದರೂ ನನ್ನನ್ನು ಭೇಟಿ ಮಾಡಬಹುದು. ಡಿ.ಟಿ.ಶ್ರೀನಿವಾಸ್, ಪರಿಷತ್ ಸದಸ್ಯ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend