ಹೃದಯಾಘಾತವಾದಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕ ಕಾರ್ಯಕ್ರಮ.!

Listen to this article

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ 2021 ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ CPR ಪ್ರೋಗ್ರಾಮ್ ಅಡಿಯಲ್ಲಿ ವ್ಯಕ್ತಿಗೆ ಹೃದಯಾಘಾತವಾದಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮುಖಾಂತರ ತಿಳಿಸಿ ಕೊಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ….
ಮೊಳಕಾಲ್ಮುರು ಪಟ್ಟಣದ ಸರ್ವೋದಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಚೈತನ್ಯ ಪಬ್ಲಿಕ್ ಶಾಲೆಯಲ್ಲಿ ತಂಡದಿಂದ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಸರ್ವೋದಯ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ವನಿತಾ ಗಿರೀಶ್ ಮಾತನಾಡಿ ದೇಶದಲ್ಲಿ ಇಂದಿನ ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಘಾತ ತೀವ್ರ ಆತಂಕಕಾರಿ ವಿಷಯವಾಗಿದೆ.. ಹೃದಯಾಘಾತದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ ಯುವಕರು ಸೇರಿದಂತೆ ಮಕ್ಕಳಿಗೆ ಶಾಲಾ ದಿನಗಳಿಂದಲೂ ಹೃದಯಾಘಾತಕ್ಕೆ ಕಾರಣವಾಗುವ ವಿವಿಧ ಅಂಶಗಳು ಕಂಡುಬರುತ್ತವೆ. ಇದರ ಬಗ್ಗೆ ತಿಳಿಸಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಮಕ್ಕಳ ಭವಿಷ್ಯತ್ತಿಗೆ ಬಹುಮುಖ್ಯ ಪಾತ್ರ ವಹಿಸಲಿದೆ ಎಂದರು. ಕಾರ್ಯಕ್ರಮದಲ್ಲಿ ಮಾಸ್ ಸಿಪಿಆರ್ ಪ್ರೋಗ್ರಾಮ ತರಬೇತಿ ವೈದ್ಯರಾದ ವಿಕಾಸ್ ಹಾಗೂ ತಂಡದ ಸದಸ್ಯರಾದ ರಾಹುಲ್ ಅನನ್ಯ ಆಕಾಶ್ ಸೇರಿದಂತೆ ಸಂಸ್ಥೆಯ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು…

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend