ಕೂಡ್ಲಿಗಿ: ಎಲ್ಲಾ ಧರ್ಮ, ಭಾಷೆ ಹಾಗೂ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡುವುದು ಸದ್ಭಾವನಾ ದಿನದ ಉದ್ದೇಶವಾಗಿದೆ. ಎಂದು ಪಾಚಾರ್ಯೆ ಡಾ.ಟಿ.ಕೋತ್ಲಮ್ಮ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ರಾಷ್ಟ್ರೀಯ ಸದ್ಭಾವನ ದಿನವನ್ನು ಆಚರಿಸಿದರು.ಜಗತ್ತಿಗೆ ಏಕತೆಯ ಸಂದೇಶ ಸಾರಿ, ಸಂಪ್ರದಾಯ, ಸಂಸ್ಕೃತಿಯಲ್ಲಿ ಮಾದರಿಯಾಗಿರುವ ಭಾರತದಲ್ಲಿ ವಿವಿಧ ಜಾತಿ,ಮತ, ಪಂಥಗಳಿದ್ದರೂ, ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತಿದ್ದೆವೆ ಎಂದು
ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜೆ.ವೆಂಕಟೇಶ ‘ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ. ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ’ ಎಂದು ತಿಳಿಸಿದರು. ಭಾರತೀಯರೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದೆವೆ. ಇದನ್ನು ಮುಂದಿನ ಜನಾಂಗಕ್ಕೂ ಪರಿಚಯಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಗ್ಗಪ್ಪಹಳ್ಳಿ,ಸಕ್ರಪ್ಪರಡ್ಡೇರ್,ಎ. ಹೂಲೇಪ್ಪ,ಸುಮ,ಮಹಾಂತೇಶ. ಕಾಲೇಜ್ ನ ಎಲ್ಲಾ ಮಕ್ಕಳು ಹಾಜರಿದ್ದರು.
ಪೋಟೋ
೧೮ಕೆಡಿಎಲ್: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ರಾಷ್ರೀಯ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾನ ವಿಧಿಯನ್ನು ಜೆ.ವೆಂಕಟೇಶ ಬೋಧಿಸಿದರು…
ವರದಿ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030