ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…!!!

Listen to this article

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…
ಕಾನಹೊಸಹಳ್ಳಿ:- ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಹೋಬಳಿ ಆಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಾನ್ಯ ತಹಸೀಲ್ದಾರರಾದ ಟಿ ಜಗದೀಶ್ ಮತ್ತು ತಾಲೂಕಾಡಳಿತ ಆಲೂರು ಗ್ರಾಮದಲ್ಲಿ ಸಂಚರಿಸಿ ಜನರ ಮೂಲಭೂತ ಸೌಕರ್ಯಗಳ ಹಾಗೂ ಕೆಲವು ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ನಂತರ ಕಾರ್ಯಕ್ರಮವನ್ನು ಆಯೋಜಿಸಿದ್ದ ಸ್ಥಳಕ್ಕೆ ಆಗಮಿಸಿದರು.
*ಕಾರ್ಯಕ್ರಮ ತಡೆದು ಪ್ರತಿಭಟನೆ*
ತಾಶೀಲ್ದಾರ್ ಆಗಮಿಸುತ್ತಿದ್ದಂತೆ ಆಲೂರು ಮತ್ತು ಕಾನಮಡುಗು ಗ್ರಾಮದ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಕಾರ್ಯಕ್ರಮವನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದ ವೇದಿಕೆಯ ಮುಂಭಾಗದಲ್ಲಿ ಪ್ರತಿಭಟನೆನಡೆಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆಎಂ ಶಶಿಧರ ಸ್ವಾಮಿ ಮುಂದಾಳತ್ವದಲ್ಲಿ ಕೆಲವು ಜನಪ್ರತಿನಿಧಿಗಳು ಸಾರ್ವಜನಿಕರು ಜಿಲ್ಲಾಧಿಕಾರಿಗಳ ನಡಹಳ್ಳಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಆದರೂ ಈ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು ಕಾರಣ ಆಲೂರು ಗ್ರಾಮ ಪಂಚಾಯಿತಿಗೆ ಸೇರಿದ ಕಾನಮಡುಗು ಮತ್ತು ಆಲೂರು ಸುತ್ತಮುತ್ತಲಿನ ಹಳ್ಳಿಗಳ ಸಮಸ್ಯೆ ಕುಂದುಕೊರತೆಗಳ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು, ಕಾನಮಡುಗು ಮತ್ತು ಆಲೂರು ಗ್ರಾಮದ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿರುವುದರಿಂದ ಹಾಗೂ ಈ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿರುವುದರಿಂದ ಸುಮಾರು 12ರಿಂದ 13 ಜನ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳಿಗೆ ಹಾಗೂ ಈ ಹಿಂದೆ ಇದ್ದ ತಾಸಿಲ್ದಾರ ಮಹಾಬಲೇಶ್ವರ ಅವರಿಗೂ ತಿಳಿಸಲಾಗಿತ್ತು ಆದರೂ ಏನೂ ಪ್ರಯೋಜನ ಆಗಲಿಲ್ಲ. 2021 ರಲ್ಲಿ ಆಲೂರು ಕಾನಮಡುಗು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ
ಮಾಡಲು ಅರ್ಜಿಯನ್ನು ಕೊಡಲಾಗಿತ್ತು ಇದುವರೆಗೂ ಈ ವಿಚಾರದ ಸಂಬಂಧ ಯಾವ ಅಧಿಕಾರಿಗಳು ಗಮನ ಹರಿಸಿಲ್ಲ ಕಾರಣ ನಾವು ಯಾವ ಅಧಿಕಾರಿಗಳಿಗೆ ಹೇಳಿದರು ಪ್ರಯೋಜನವಾಗಲಿಲ್ಲ ಆದ್ದರಿಂದ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮಕ್ಕೆ ಬರುವವರೆಗೂ ಕಾರ್ಯಕ್ರಮವನ್ನು ಮುಂದುವರಿಯಲು ಬಿಡುವುದಿಲ್ಲ ಎಂದು ಹಠ ಹಿಡಿದು ಕಾರ್ಯಕ್ರಮದ ಮುಂದಾಗ ಧರಣಿ ಕುಳಿತರು.
*ಮಧ್ಯಾಹ್ನದ ವೇಳೆ ಹೊಸಪೇಟೆ ಸಹಾಯಕ ಆಯುಕ್ತರು ಬಂದಮೇಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು*
ಹೊಸಪೇಟೆ ವಿಭಾಗದ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ ವರು
ಕಾರ್ಯಕ್ರಮಕ್ಕೆ ಬಂದನಂತರ ಧರಣಿ ನಡೆಸುತ್ತಿದ್ದ ಮುಖಂಡರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದುವರಿಸಲು ಅನುವು ಮಾಡಿಕೊಟ್ಟರು.
ಮಾನ್ಯ ತಾಸಿಲ್ದಾರ ಟಿ.ಜಗದೀಶ್ ರವರು ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ಸರ್ಕಾರದ ಯೋಜನೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವದನ್ನು ತಪ್ಪಿಸಲು ಸರ್ಕಾರ ಯೋಜನೆಯನ್ನು ಜಾರಿಗೆ ಮಾಡಿದೆ. ಗ್ರಾಮಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ಸರ್ಕಾರದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಶೀಲ್ದಾರ್ ಟಿ ಜಗದೀಶ್ ಜನರಿಗೆ ಕರೆ ನೀಡಿದರು.
ನಂತರ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಆಲೂರು ಮತ್ತು ಕಾನಾಮಡುಗುವಿನ ಮಧ್ಯಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಸಲು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು ನಂತರ ಈ ಭಾಗದಲ್ಲಿ ನಡೆಯುವ ಮರಳು ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು, ಕಂದಾಯ ಗ್ರಾಮಕ್ಕೆ ಸಂಬಂಧಿಸಿದಂತೆ ನಿಮ್ಮ ಅರ್ಜಿಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಂದ ಅರ್ಜಿಗಳನ್ನು ಪರಿಶೀಲಿಸಿ ತಶಿಲ್ದಾರ ಸಮ್ಮುಖದಲ್ಲಿ ಸ್ಥಳದಲ್ಲಿ ಪರಿಹಾರ ನೀಡಿದರು.


ರಕ್ತದಾನ ಶಿಬಿರ:- ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ರಕ್ತನಿಧಿ ಬಂಡಾರ ಹಗರಿಬೊಮ್ಮನಹಳ್ಳಿ ಇವರ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು ಈ ರಕ್ತದಾನ ಶಿಬಿರದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆಐವತ್ತು ಜನ ರಕ್ತದಾನವನ್ನು ಮಾಡಿದರು.
ರಾಷ್ಟ್ರೀಯ ಪೋಷಣೆ ಮಾಸಾಚರಣೆ :- ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಹಿಳಾಮತ್ತುಮಕ್ಕಳಅಭಿವೃದ್ಧಿಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣೆ ಮಾಸಾಚರಣೆ ಮಾತೃವಂದನ ಸಪ್ತ ಉದ್ಘಾಟನೆ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರ ಮೇಳದ ಉದ್ಘಾಟನೆಯನ್ನು ತಾಸಿಲ್ದಾರ ಜಗದೀಶ್ ನೆರವೇರಿಸಿದರು ನಂತರ ತಹಸೀಲ್ದಾರ್ ಮಾತನಾಡಿ ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಸದೃಢ ನಾಗರಿಕರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿಕಾರಿ ಅಂಗನವಾಡಿ ಕಾರ್ಯಕರ್ತೆಯರು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.


ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿ ವೈ ರವಿಕುಮಾರ್, ಗ್ರಾಮ ಪಂ ಅಧ್ಯಕ್ಷೆ ಮಹದೇವಿ ಹನುಮಂತಪ್ಪ, ಡಿವೈಎಸ್ಪಿ ಹರೀಶ್ ರೆಡ್ಡಿ, ಕೊ ಟ್ಟೂರು ಸಿಪಿಐ ಸೋಮಶೇಖರ ಕೆಂಚ ರೆಡ್ಡಿ, ಹೊಸಹಳ್ಳಿ ಪಿಎಸ್ಐ ತಿಮ್ಮಣ್ಣ ಚಾಮನೂರು. ಉಪತಹಶೀಲ್ದಾರ್ ಚಂದ್ರಮೋಹನ್. ಕಂದಾಯ ನಿರೀಕ್ಷಕ ಮುರಳಿಕೃಷ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ ಶಿವರಾಜ್,ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ,ಶಿಕ್ಷಣ ಇಲಾಖೆಯ ಬಿ.ಈ. ಓ. ಶಿವರಾಜ್ ನಾಯ್ಕ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆಎಂ ಶಶಿಧರ ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಚನ್ನಪ್ಪ, ಶಿಕ್ಷಣ ಇಲಾಖೆಯ ಕಾನಾಮಡಗು ತಳವಾರ ಶರಣಪ್ಪ, ಸಿದ್ದಾಪುರ ಗ್ರಾಮದ ಸಿದ್ದೇಶ್ವರ, ದಲಿತ ಮುಖಂಡರಾದ ಪಕೀರಪ್ಪ ಮತ್ತು ದುರುಗೇಶ್, ದಂಡೆಪ್ಪ,ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮತ್ತು ಸಿಬ್ಬಂದಿ ವರ್ಗ, ಮತ್ತು ಶಾಲೆಯ ಮಕ್ಕಳು,ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ತಾಲೂಕು ಆಡಳಿತ, ಜನಪ್ರತಿನಿಧಿಗಳು ಸೇರಿದಂತೆ ಪತ್ರಿಕಾ ಬಳಗದವರು ಇತರರಿದ್ದರು.

ವರದಿ ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend