ಪತ್ನಿಯೊಂದಿಗೆ ಗುಡೇಕೋಟೆ ಗ್ರಾ. ಪಂ. ಮತಗಟ್ಟೆಗೆ ತೆರಳಿ ಮತಚಲಾಯಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ ಟಿ…!!!

Listen to this article

ಈಶಾನ್ಯ ಪದವೀಧರ ಮತ ಕ್ಷೇತ್ರದ ಚುನಾವಣೆ ; ತಮ್ಮ ಧರ್ಮ ಪತ್ನಿಯೊಂದಿಗೆ ಗುಡೇಕೋಟೆ ಗ್ರಾ. ಪಂ. ಮತಗಟ್ಟೆಗೆ ತೆರಳಿ ಮತಚಲಾಯಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ ಟಿ.ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ. ಡಾ. ಶ್ರೀನಿವಾಸ್. ಎನ್. ಟಿ. ಅವರು ತಮ್ಮ ಧರ್ಮ ಪತ್ನಿಯಾದ ಶ್ರೀಮತಿ ಡಾ. ಪುಷ್ಪಾ ಅವರೊಂದಿಗೆ ಗುಡೇಕೋಟೆ ಗ್ರಾಮ ಪಂಚಾಯತಿ ಕಾರ್ಯಾಲಯದ ಮತಗಟ್ಟೆಗೆ ತೆರಳಿ ದಿ. 03-06-24 ರಂದು ತನ್ನ ಕ್ಷೇತ್ರದ “ಶಿಕ್ಷಣ ಮತ್ತು ಉದ್ಯೋಗ” ಕ್ಕಾಗಿ ಅಭಿವೃದ್ಧಿಗೆ ಒತ್ತು ಕೊಡಲು ಈಶಾನ್ಯ ಪದವೀಧರ ಮತ ಕ್ಷೇತ್ರದ ಅಭ್ಯರ್ಥಿಗೆ ಮತ ಚಲಾಯಿಸಿದರು. ಗುಡೇಕೋಟೆ, ಹೊಸಹಳ್ಳಿ , ಕೂಡ್ಲಿಗಿ ಭಾಗದ ಕಾಂಗ್ರೆಸ್ ಪಕ್ಷದ ವಿವಿಧ ಪದಾಧಿಕಾರಿಗಳು – ಮುಖಂಡರನ್ನು ಭೇಟಿ ಮಾಡಿದ ಶಾಸಕರು ಹೇಗೆ ಮತದಾನ ನಡೆದಿದೆ ಎಂಬ ಅಂಕಿ- ಅಂಶಗಳನ್ನು ಪಡೆದರು. ಈ ಸಂದರ್ಭದಲ್ಲಿ ಹೊಸಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಕುಮಾರ್ ಗೌಡ , ಕೂಡ್ಲಿಗಿ ಬ್ಲಾಕ್ ಅಧ್ಯಕ್ಷರಾದ ಗುರುಸಿದ್ದನಗೌಡ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್. ವೆಂಕಟೇಶ, ಮುಖಂಡರಾದ ಕಾವಲಿ ಶಿವಪ್ಪನಾಯಕ, ಜಿಂಕಲ್ ನಾಗಮಣಿ, ಇನ್ನೂ ಮುಂತಾದವರು ಉಪಸ್ಥಿತರಿದ್ದರು….

ವರದಿ. ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend