ವಿಶೇಷಚೇತನರು, ಹಿರಿಯ ನಾಗರಿಕರು ಮೌಲ್ಯ ಮಾಪನ ಶಿಬಿರಗಳ ಸದುಪಯೋಗಪಡೆದುಕೊಳ್ಳಿ: ಡಾ.ಎನ್.ಬಸರೆಡ್ಡಿ…!!!

Listen to this article

ವಿಶೇಷಚೇತನರು, ಹಿರಿಯ ನಾಗರಿಕರು ಮೌಲ್ಯ ಮಾಪನ ಶಿಬಿರಗಳ ಸದುಪಯೋಗಪಡೆದುಕೊಳ್ಳಿ: ಡಾ.ಎನ್.ಬಸರೆಡ್ಡಿ

ಬಳ್ಳಾರಿ:ಅಲಿಂಕೋ ಸಂಸ್ಥೆ ವತಿಯಿಂದ ಪ್ರತಿ ವರ್ಷ ಮೌಲ್ಯ ಮಾಪನ ಶಿಬಿರಗಳ ಮೂಲಕ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ಅವಶ್ಯವಿರುವ ಸಾಧನ ಸಲಕರಣೆಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜೂ.12 ರಿಂದ 18 ರವರೆಗೂ ಮೌಲ್ಯ ಮಾಪನ ಶಿಬಿರಗಳು ನಡೆಯಲಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ ಅವರು ಹೇಳಿದರು.
ಕೇಂದ್ರ ಸರ್ಕಾರದ ಆಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿಯ ಅಲಿಂಕೋ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವಸತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಮಂಗಳವಾರ ಜಿಲ್ಲಾ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಮೌಲ್ಯ ಮಾಪನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯ ಮಾಪನ ಶಿಬಿರಗಳಲ್ಲಿ ಭಾಗವಹಿಸಿ ವೈದ್ಯಾಧಿಕಾರಿಗಳ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿದಲ್ಲಿ ತಮಗೆ ಅವಶ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಈ ಸೌಲಭ್ಯಗಳನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ವಿಮಾಲಾಕ್ಷ್ಮಿ, ಕಿವಿ, ಮೂಗು, ಗಂಟಲು ತಜ್ಞರಾದ ಡಾ.ಅನಿಲ್ ರೆಡ್ಡಿ, ಡಾ.ವಿನಯ್, ಆಡಿಯೋಲಾಜಿಸ್ಟ್ ಡಾ.ವರ್ಷ, ಮಕ್ಕಳ ತಜ್ಞೆ ಡಾ.ತೇಜಾ, ಫಿಜಿಯೋಥೆರಪಿಸ್ಟ್ ಡಾ.ಕೃಷ್ಣ, ಡಾ.ರೂಪೇಶ್ ಕುಮಾರ್, ಡಾ.ನಿಹಾಲ್ ಕುಮಾರ್, ಅವಿನಾಶ್, ನಿತೀಶ್, ಕಿಷನ್, ಸ್ಪೀಚ್ ಥೆರಪೀಸ್ಟ್ ಜ್ಯೋಷಿ, ಜಿಲ್ಲಾ ಪುನರ್ವಸತಿ ಕೇಂದ್ರದ ಸಂಯೋಜಕರಾದ ನಾಗೇಂದ್ರ ಮತ್ತು ನಾರಯಣನಾಯ್ಕ್, ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಸಿ.ರಾಣಿ ಮತ್ತು ನಗರ ಪುನರ್ವಸತಿ ಕಾರ್ಯಕರ್ತರು ಸೇರಿದಂತೆ ಸಿಬ್ಬಂದಿಗಳು ಹಾಗೂ ಬಳ್ಳಾರಿ ನಗರದ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend