ಸ್ವಾವಲಂಬಿ ಜೀವನಕ್ಕಾಗಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ :ಡಾ. ಶ್ರೀನಿವಾಸ್ ಎನ್. ಟಿ.
ದಿನಾಂಕ 11.07.2024 ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಉಚಿತ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು, ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರ ಜೀವನೋಪಾಯ ಹಾಗೂ ಆರ್ಥಿಕ ಅಭಿವೃದ್ಧಿಗೆ ಯಾರನ್ನು ಅವಲಂಬಿಸದೆ ಮಹಿಳೆಯರು ಹೊಲಿಗೆ ಕಾಯಕದ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030