ನರೇಗಾ ಯೋಜನೆಯ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ಅವರಿಂದ ಪರಿಶೀಲನೆಯನ್ನು ಮಾಡಲಾಯಿತು…!!!

Listen to this article

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯ ನರೇಗಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಮಾನವ ದಿನಗಳನ್ನು ನಿರ್ಮಿಸಿ ಕೂಲಿ ಕಾರ್ಮಿಕರ ಬದುಕಿಗೆ ಆಸರೆಯಾಗುವ ಯೋಜನೆಯನ್ನು ಜವಾಬ್ದಾರಿಯುತವಾಗಿ ಅನುಷ್ಠಾನಗೊಳಿಸಬೇಕೆಂದು ನರೇಗಾ ಯೋಜನೆಯ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ತಿಳಿಸಿದರು.
ಅವರು, ಮಂಗಳವಾರ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಈಶ್ವರಪ್ಪನವರ ಮಟ್ಟಿ ಹಿಂಭಾಗದ ಗೋಕಟ್ಟೆಯಲ್ಲಿ ಹೂಳು ತುಂಬಿದ್ದು ಸುಮಾರು ೪.೭೫ ಲಕ್ಷ ವೆಚ್ಚದಲ್ಲಿ ಕಾಮಗಾರಿ ಅನುಷ್ಠಾನಗೊಂಡಿದ್ದು ಹಲವಾರು ಕಾರ್ಮಿಕರು ಇದರಲ್ಲಿ ಭಾಗವಹಿಸಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಿಪ್ಪಮ್ಮಯ್ಯನಹಳ್ಳಿ ಗ್ರಾಮದ ರಸ್ತೆ ಬದಿ ನೀರಿನ ತೊಟ್ಟಿಯನ್ನು ನಿರ್ಮಿಸಲಾಗುತ್ತಿದ್ದು ಅದನ್ನು ಪರಿಶೀಲನೆ ನಡೆಸಿ ಎಷ್ಟು ಜನ ಕೂಲಿಕಾರ್ಮಿಕರು ಇದ್ದಲ್ಲಿ ಭಾಗವಹಿಸಿದ್ಧಾರೆ.ಎಷ್ಟು ದಿನಗಳ ಕೆಲಸ ಎಂದು ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿ ಅವರು, ನರೇಗಾ ಕಾಮಗಾರಿಯಲ್ಲಿ ಯಾವುದೇ ಕಾರಣಕ್ಕೂ ಯಂತ್ರ ಉಪಯೋಗಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಯೋಜನಾಧಿಕಾರಿ ರಂಜುತುಳಸಿಪುಟ್ರಿ ಮಾತನಾಡಿ, ನರೇಗಾ ಯೋಜನೆಯಡಿ ಯಾವುದೇ ಕಾಮಗಾರಿ ಅನುಷ್ಠಾನಗೊಳಿಸಿದರೂ ಅದರ ಪೂರ್ಣಪ್ರಮಾಣದ ಫಲವನ್ನು ಕೂಲಿಕಾರ್ಮಿಕರು ಪಡೆಯಬೇಕಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಈ ಮಹತ್ತರ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮೀಣ ಭಾಗದ ಬಡ ಕೂಲಿಕಾರ್ಮಿಕರಿಗೆ ಆಸರೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮತ್ತೆ ಮಳೆ ವೈಪಲ್ಯವಾಗಿದ್ದು, ಬಹುತೇಕ ಎಲ್ಲಾ ಜನರು ನರೇಗಾ ಕಾಮಗಾರಿಯ ಬಗ್ಗೆ ಆಸಕ್ತಿ ವಹಿಸಿದ್ಧಾರೆ ಎಂದರು.

ತಾಲ್ಲೂಕುಮಟ್ಟದಲ್ಲಿ ಯಾವುದೇ ಯೋಜನೆ ಅನುಷ್ಠಾನವಾಗಬೇಕಾದರೆ ಅದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂಬಂಧಪಟ್ಟ ಯೋಜನಾ ನಿರ್ದೇಶಕರಿಂದ ಸಾಧಕ, ಬಾಧಕಗಳನ್ನು ಚರ್ಚಿಸಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಸಲಹೆ ನೀಡಿದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend